ಮೈಸೂರು, OCT.06,2026: ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೈಸೂರು ಮಹಾನಗರ ಪಾಲಿಕೆಯ ಅಭಯ ತಂಡದ ಸಿಬ್ಬಂದಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಎಫ್‌ಟಿಎಸ್ ವೃತ್ತದ ಬಳಿ ನಡೆದಿದೆ.
ಪಾಲಿಕೆ ಅಭಯ ತಂಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಘು ಹಲ್ಲೆಗೊಳಗಾದವರು. ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮಾದೇಶ ಮತ್ತು ಆಕಾಶ್ ಎಂಬವರು ರಘು ಅವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದ ರಘು ಗಾಯಗೊಂಡಿದ್ದು, ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಪಾಲಿಕೆ ಅಧಿಕಾರಿಗಳು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದೇಶ ಮತ್ತು ಆಕಾಶ್ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

KEY WORDS:
Mysuru MCC worker attack, FTS Circle attack, Mysuru crime news, MCC Abhaya team, Raghuh attack, Mysuru Madesh and Akash arrested, Mysuru police







