ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ ಕರ್ನಾಟಕದ ಸಾಧಕರನ್ನು ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಯಿತು.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ಅವರು ಕ್ರೀಡಾಪಟುಗಳಾದ ಪೂವಮ್ಮ ಮತ್ತು ಶ್ರೇಯಾಂಕಾ ಪಾಟೀಲ್ ಅವರನ್ನು ಸನ್ಮಾನಿಸಿದರು. ಈ ವೇಳೆ ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳಿಗೆ ನೀಡಲಾಗುವ ನಗದು ಪುರಸ್ಕಾರದ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. 
ಚಿನ್ನದ ಪದಕ ವಿಜೇತರಿಗೆ 1 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ನಗದು ಬಹುಮಾನ ನೀಡಲು ಮೊತ್ತವನ್ನು ಪರಿಷ್ಕರಿಸಲಾಗಿದೆ. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕರ್ನಾಟಕದ 20 ಅಥ್ಲೀಟ್‌ಗಳಿಗೆ ಪ್ರಥಮ ಬಾರಿಗೆ ತಲಾ 5 ಲಕ್ಷ ರೂ.ಬಹುಮಾನ ನೀಡಲು ನಿರ್ಧರಿಸಿದೆ.






