ಮೈಸೂರು,ಅಕ್ಟೋಬರ್,6,2026 (www.justkannada.in): ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈರುತ್ಯ ರೈಲ್ವೆಯು ವಿವಿಧ ನಿಲ್ದಾಣಗಳ ನಡುವೆ ಹೆಚ್ಚುವರಿಯಾಗಿ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಈ ಕೆಳಗಿನ ಹೆಚ್ಚುವರಿ ಕಾಯ್ದಿರಿಸದ ವಿಶೇಷ ರೈಲುಗಳು ಸಂಚರಿಸಲಿವೆ.
- ಕೆಎಸ್ಆರ್ ಬೆಂಗಳೂರು–ಅಶೋಕಪುರಂ ನಡುವೆ 3 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06285/06286):
ರೈಲು ಸಂಖ್ಯೆ 06285 ಕೆಎಸ್ಆರ್ ಬೆಂಗಳೂರು–ಅಶೋಕಪುರಂ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 12:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 15:40 ಗಂಟೆಗೆ ಅಶೋಕಪುರಂ ತಲುಪಲಿದೆ.
ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06286 ಅಶೋಕಪುರಂ–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 19.10.2026, 20.10.2026 ಮತ್ತು 21.10.2026 ರಂದು 16:10 ಗಂಟೆಗೆ ಅಶೋಕಪುರಂನಿಂದ ಹೊರಟು, ಅದೇ ದಿನ 20:00 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.
ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಎಲಿಯೂರು, ಬ್ಯಾಡರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಹಾಗೂ ಚಾಮರಾಜಪುರಂ ನಿಲ್ದಾಣಗಳಲ್ಲಿ ನಿಲ್ಲಲಿವೆ.
- ಕೆಎಸ್ಆರ್ ಬೆಂಗಳೂರು–ಮೈಸೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06287/06288):
ರೈಲು ಸಂಖ್ಯೆ 06287 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 21:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ 00:20 ಗಂಟೆಗೆ ಮೈಸೂರು ತಲುಪಲಿದೆ.
ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06288 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 00:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 03:30 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.
ಎಂಟು ಮೆಮು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಪಾಂಡವಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ. ರೈಲು ಸಂಖ್ಯೆ 06285/06286 ಮತ್ತು 06287/06288 ಎಂಟು ಮೆಮು ಕಾರ್ ಬೋಗಿಗಳನ್ನು ಹೊಂದಿರಲಿವೆ.
- ಮೈಸೂರು–ಕೆಎಸ್ಆರ್ ಬೆಂಗಳೂರು ನಡುವೆ 6 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06297/06298):
ರೈಲು ಸಂಖ್ಯೆ 06297 ಮೈಸೂರು–ಕೆಎಸ್ಆರ್ ಬೆಂಗಳೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 16.10.2026, 17.10.2026, 18.10.2026, 19.10.2026, 20.10.2026 ಮತ್ತು 21.10.2026 ರಂದು 23:15 ಗಂಟೆಗೆ ಮೈಸೂರಿನಿಂದ ಹೊರಟು, ಮರುದಿನ 02:50 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.
ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06298 ಕೆಎಸ್ಆರ್ ಬೆಂಗಳೂರು–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 17.10.2026, 18.10.2026, 19.10.2026, 20.10.2026, 21.10.2026 ಮತ್ತು 22.10.2026 ರಂದು 03:15 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ 06:30 ಗಂಟೆಗೆ ಮೈಸೂರು ತಲುಪಲಿದೆ.
ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಶ್ರೀರಂಗಪಟ್ಟಣ, ಪಾಂಡವಪುರ, ಬ್ಯಾಡರಹಳ್ಳಿ, ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ನಿಲ್ಲಲಿವೆ.
- ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06293/06294):
ರೈಲು ಸಂಖ್ಯೆ 06293 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 21:30 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 23:20 ಗಂಟೆಗೆ ಚಾಮರಾಜನಗರ ತಲುಪಲಿದೆ.
ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06294 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 23:50 ಗಂಟೆಗೆ ಚಾಮರಾಜನಗರದಿಂದ ಹೊರಟು, ಮರುದಿನ 01:50 ಗಂಟೆಗೆ ಮೈಸೂರು ತಲುಪಲಿದೆ.
ಇಪ್ಪತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.
- ಮೈಸೂರು–ಚಾಮರಾಜನಗರ ನಡುವೆ 1 ಟ್ರಿಪ್ ಕಾಯ್ದಿರಿಸದ ವಿಶೇಷ ರೈಲು ಸಂಚಾರ (06289/06290):
ರೈಲು ಸಂಖ್ಯೆ 06289 ಮೈಸೂರು–ಚಾಮರಾಜನಗರ ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 00:10 ಗಂಟೆಗೆ ಮೈಸೂರಿನಿಂದ ಹೊರಟು, ಅದೇ ದಿನ 02:00 ಗಂಟೆಗೆ ಚಾಮರಾಜನಗರ ತಲುಪಲಿದೆ.
ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 06290 ಚಾಮರಾಜನಗರ–ಮೈಸೂರು ಕಾಯ್ದಿರಿಸದ ವಿಶೇಷ ರೈಲು ದಿನಾಂಕ 21.10.2026 ರಂದು 02:30 ಗಂಟೆಗೆ ಚಾಮರಾಜನಗರದಿಂದ ಹೊರಟು, ಅದೇ ದಿನ 04:15 ಗಂಟೆಗೆ ಮೈಸೂರು ತಲುಪಲಿದೆ.
ಹತ್ತೊಂಬತ್ತು ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲುಗಳು, ಎರಡೂ ಮಾರ್ಗಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೊಳ, ತಾಂಡವಪುರ ಹಾಲ್ಟ್, ಸುಜಾತಾಪುರ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ ಗಂಗವಾಡಿ ಹಾಲ್ಟ್ ನಿಲ್ದಾಣಗಳಲ್ಲಿ ನಿಲ್ಲಲಿವೆ.






