ನವದೆಹಲಿ,ಅಕ್ಟೋಬರ್,7,2026 (www.justkannada.in): ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಿನ್ನೆ ಪ್ರತಿಭಟನೆ ನಡೆಸಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿ ಹಲವರ ವಿರುದ್ದ ದೂರು ದಾಖಲಾಗಿದೆ.
ಆಕಾಶವಾಣಿ ಭವನಕ್ಕೆ ಅನಧಿಕೃತವಾಗಿ ಪ್ರವೇಶಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ ದೂರು ದಾಖಲಾಗಿದೆ. ಆಕಾಶವಾಣಿ ಭವನದ ಅಧಿಕಾರಿಗಳು ಸಂಸತ್ ಮಾರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟದ ನಾಯಕರು ಪ್ರತಿಭಟನೆ ನಡೆಸಿ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದರು. ಈ ವೇಳೆ ದೆಹಲಿ ಪೊಲೀಸರು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ವಶಕ್ಕೆ ಪಡೆದಿದ್ದರು.






