ಚಾಮರಾಜನಗರ,ಅಕ್ಟೋಬರ್,7,2026 (www.justkannada.in): ರಾಜ್ಯದಲ್ಲಿ ಹಾಲಿನ ದರವನ್ನು 8 ರೂಪಾಯಿಯಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ, ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಕೇರಳ, ತಮಿಳುನಾಡು ಆಂಧ್ರ ಪ್ರದೇಶದಲ್ಲಿ ಹಾಲಿನ ದರ ಹೆಚ್ಚಿದೆ. ನಮ್ಮ ರಾಜ್ಯದ ರೈತರಿಗೂ ಕೂಡ ಉತ್ತಮ ಬೆಲೆ ಸಿಗಲೇಬೇಕಿದೆ ಎಂದರು.
8 ರೂ.ನಷ್ಟು ದರ ಏರಿಕೆ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ. ನೀತಿ ಸಂಹಿತೆ ಇರುವ ಕಾರಣ ಸದ್ಯಕ್ಕೆ ತಡೆ ಹಿಡಿಯಲಾಗಿದೆ. ಸಿಎಂ ಅವರೇ ಮುಂದಿನ ದಿನದಲ್ಲಿ ಈ ಕುರಿತು ಮಾತನಾಡಲಿದ್ದಾರೆ ಎಂದು ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು.






