ಬೆಂಗಳೂರು, ಅಕ್ಟೋಬರ್ ,7,2026 (www.justkannada.in): ತಮ್ಮ ಸಚಿವ ಸಂಪುಟ ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ ವಿಚಾರ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಅವರು ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ್ದರು ಎಂದು ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕವೇ ಸಿಎಂ ಆದರು ಎಂದು ಕೆಲ ಕಾಂಗ್ರೆಸ್ ನಾಯಕರೇ ಮಾತನಾಡುತ್ತಿದ್ದಾರೆ. ಈಗ ಸಚಿವರನ್ನು ನಿಯಂತ್ರಿಸಲು ಡಿಕೆ ಶಿವಕುಮಾರ್ ಅದೇ ತಂತ್ರ ಬಳಸುತ್ತಿದ್ದಾರೆ ಎಂದು ಹೇಳಿದ್ದಾರೆ.







