Wednesday, October 7, 2026

BDA Apartments

ಕೋವಿಡ್ ನೆಗೆಟಿವ್ ಇದ್ದರೆ ಮಾತ್ರ ಮೈಸೂರು ಜಿಲ್ಲೆಗೆ ಪ್ರವೇಶ : ಸಚಿವ ಎಸ್.ಟಿ.ಸ...
Home Front Page ವಿವಿಧ ವಿವಿಗಳ ಪ್ರಗತಿ ಪರಿಶೀಲಿಸಿದ ಸಚಿವ ಬಸವರಾಜ ರಾಯರೆಡ್ಡಿ

ವಿವಿಧ ವಿವಿಗಳ ಪ್ರಗತಿ ಪರಿಶೀಲಿಸಿದ ಸಚಿವ ಬಸವರಾಜ ರಾಯರೆಡ್ಡಿ

ಮೈಸೂರು, ಅಕ್ಟೋಬರ್,7,2026 (www.justkannada.in): ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಇಂದು ಮೈಸೂರಿನ ಕ್ರಾಫರ್ಡ್ ಹಾಲ್‌ ನಲ್ಲಿ ಮೈಸೂರು ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನೆ ನಡೆಸಿದರು.

ಮೈಸೂರು ವಿಶ್ವವಿದ್ಯಾಲಯ, ಮಂಡ್ಯ ವಿಶ್ವವಿದ್ಯಾಲಯ, ಹಾಸನ ವಿಶ್ವವಿದ್ಯಾಲಯ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪ್ರಗತಿ ಕುರಿತು ಸಚಿವ ಬಸವರಾಜ ರಾಯರೆಡ್ಡಿ ಮಾಹಿತಿ ಪಡೆದುಕೊಂಡರು.

ಮೈಸೂರು ವಿಶ್ವವಿದ್ಯಾಲಯದಿಂದ ಮಂಡ್ಯ, ಹಾಸನ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕಗೊಂಡ ಬಳಿಕ ಆಯಾ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳಿಗೆ ಲಭ್ಯವಿರುವ ಸ್ಥಳಾವಕಾಶ, ಕಟ್ಟಡಗಳ ಸ್ಥಿತಿ ಹಾಗೂ ಮೂಲಸೌಕರ್ಯಗಳ ಕುರಿತು ಸಚಿವ ಬಸವರಾಜ ರಾಯರೆಡ್ಡಿ ಮಾಹಿತಿ ಪಡೆದರು. ಅಲ್ಲದೆ, ಕಾರ್ಯನಿರ್ವಹಿಸುತ್ತಿರುವ ಖಾಯಂ ಬೋಧಕ ಸಿಬ್ಬಂದಿ, ಖಾಲಿ ಇರುವ ಹುದ್ದೆಗಳು, ಅತಿಥಿ ಉಪನ್ಯಾಸಕರು ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ವಿವರಗಳನ್ನು ಪರಿಶೀಲಿಸಿದರು.

ವಿಶ್ವವಿದ್ಯಾಲಯಗಳಲ್ಲಿನ ವಿವಿಧ ಕೋರ್ಸ್‌ ಗಳು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ, ವಿಶ್ವವಿದ್ಯಾಲಯಗಳಿಗೆ ಸಂಗ್ರಹವಾಗುತ್ತಿರುವ ಆದಾಯ, ಮಾಡಲಾಗುತ್ತಿರುವ ವೆಚ್ಚ ಹಾಗೂ ಆಯವ್ಯಯದ ವಿವರಗಳನ್ನೂ ಸಚಿವ ಬಸವರಾಜ ರಾಯರೆಡ್ಡಿ ಪಡೆದುಕೊಂಡರು.Karnataka Higher Education Minister Reviews uni

ಮೈಸೂರು ವಿಶ್ವವಿದ್ಯಾಲಯದಿಂದ ಹಾಸನ, ಮಂಡ್ಯ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕಗೊಂಡ ನಂತರ ಪಿಂಚಣಿ ಪಾವತಿ ವಿಚಾರದಲ್ಲಿ ಸಮಸ್ಯೆ ಉಂಟಾಗಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ಭರವಸೆ ನೀಡಿದರು.

ಖಾಯಂ ಉಪನ್ಯಾಸಕರ ಕೊರತೆಯಿಂದ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅವರಿಗೆ ವಿಶ್ವವಿದ್ಯಾಲಯದ ಸ್ವಂತ ಆದಾಯದಿಂದ ವೇತನ ಪಾವತಿಸುವುದು ಕಷ್ಟಕರವಾಗುತ್ತಿದೆ ಎಂಬ ವಿಷಯವೂ ಸಭೆಯಲ್ಲಿ ಪ್ರಸ್ತಾಪವಾಯಿತು. ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವಂತೆ ಸಚಿವರು ಸೂಚಿಸಿದರು. ಜತೆಗೆ, ತಾವು ಕೂಡ ಸರ್ಕಾರದ ಮಟ್ಟದಲ್ಲಿ ಈ ವಿಚಾರವನ್ನು ಚರ್ಚಿಸುವುದಾಗಿ ತಿಳಿಸಿದರು.Karnataka Higher Education Minister Reviews jk02_new jk02 new

ಸಭೆಯಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ, ಹಾಸನ ವಿಶ್ವವಿದ್ಯಾಲಯದ ಕುಲಪತಿ ತಾರಾನಾಥ್, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಶಿವಚಿತ್ತಪ್ಪ, ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Minister, Basavaraj Rayareddy, reviews, progress, various universities, Mysore

English Summary
Title

Karnataka Higher Education Minister Reviews University of Mysore Progress

Short Description
Karnataka Higher Education Minister Basavaraj Rayareddy recently conducted a rigorous progress review of several public institutions, including the historic University of Mysore (UoM). The comprehensive evaluation scrutinized university administration, research output, academic discipline, and critical infrastructure needs. Addressing systemic challenges, the Minister highlighted severe faculty shortages and strict financial constraints, noting that the state has permitted filling nearly 1,000 vacant university posts to improve education quality. Vice-Chancellors were directed to streamline academic calendars for timely exams and results.