Wednesday, October 7, 2026

BDA Apartments

ಕೋವಿಡ್ ನೆಗೆಟಿವ್ ಇದ್ದರೆ ಮಾತ್ರ ಮೈಸೂರು ಜಿಲ್ಲೆಗೆ ಪ್ರವೇಶ : ಸಚಿವ ಎಸ್.ಟಿ.ಸ...
Home Front Page ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಾರ್ಯಾಲಯ ಉದ್ಘಾಟನೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಾರ್ಯಾಲಯ ಉದ್ಘಾಟನೆ.

ಮೈಸೂರು, ಅಕ್ಟೋಬರ್,7,2026 (www.justkannada.in): ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ’ವನ್ನು ಇಂದು ಅಧಿಕೃತವಾಗಿ  ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

“ಮೈಸೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸಾರ್ವಜನಿಕರ ಕುಂದುಕೊರತೆಗಳ ಶೀಘ್ರ ಪರಿಹಾರ ಹಾಗೂ ವಿವಿಧ ಇಲಾಖೆಗಳ ಆಡಳಿತಾತ್ಮಕ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ನೂತನ ಕಾರ್ಯಾಲಯವನ್ನು ತೆರೆಯಲಾಗಿದೆ .Minister yathindra siddaramaiah.jpg1 yathindra siddaramaiah 1.jpg1 1

ಈ ನೂತನ ಕಾರ್ಯಾಲಯದ ಪ್ರಾರಂಭದಿಂದಾಗಿ ಜಿಲ್ಲೆಯ ನಾಗರಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸುಲಭವಾಗಲಿದ್ದು, ವಿವಿಧ ಇಲಾಖೆಗಳ ನಡುವಿನ ಸಮನ್ವಯತೆ ಹೆಚ್ಚಿ ಅಭಿವೃದ್ಧಿ ಕಾಮಗಾರಿಗಳು ಚುರುಕುಗೊಳ್ಳಲಿವೆ.Minister yathindra siddaramaiah yathindra siddaramaiah 1

ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ,  ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.Dr. Yathindra Siddaramaiah jk02_new jk02 new

 

English Summary
Title

Dr. Yathindra Siddaramaiah Opens New Mysuru District In-charge Minister Office

Short Description
Karnataka Urban Development Minister Dr. Yathindra Siddaramaiah officially inaugurated the new Mysuru District In-charge Minister's office. Situated within the District-Level Office Complex in Siddarthanagar on the Mysuru-T. Narasipur main road, this new administrative hub aims to accelerate regional development and resolve public grievances efficiently. Operating alongside the Deputy Commissioner's office, the facility streamlines regional governance and local administration.
Keywords
Minister, Dr. Yathindra Siddaramaiah, inaugurated, new office, Mysuru District In-charge Minister.