Thursday, October 8, 2026

BDA Apartments

Home Front Page ನನ್ನ ಹಾಗೂ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರೆಂದು ಗೊತ್ತು: ಸಿಎಂ ಡಿ.ಕೆ...

ನನ್ನ ಹಾಗೂ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದ ಪಿತಾಮಹ ಯಾರೆಂದು ಗೊತ್ತು: ಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ, ಅಕ್ಟೋಬರ್, 8,2026 (www.justkannada.in): ಮುಖ್ಯಮಂತ್ರಿ ಆದ ಬಳಿಕ ನನ್ನ ಹಾಗೂ ಇತರೆ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಯತ್ನ ನಡೆದಿದ್ದು, ಇದರ ಪಿತಾಮಹ ಯಾರು? ಇದಕ್ಕೆ ಹಣಕಾಸಿನ ನೆರವು ಯಾರು ನೀಡುತ್ತಿದ್ದಾರೆ ಹಾಗೂ ಹೇಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಚಿವರ ಮೇಲೆ ಗುಪ್ತ ಕಾರ್ಯಾಚರಣೆ ಮಾಡುತ್ತಿರುವ ಬಗ್ಗೆ ನೀಡಿರುವ ಎಚ್ಚರಿಕೆ ಬಗ್ಗೆ ಕೇಳಿದಾಗ, “ಮಾರುವೇಷದ ಕಾರ್ಯಾಚರಣೆಗಳನ್ನು ನನ್ನ ಮೇಲಿಂದಲೇ ಶುರು ಮಾಡಲು ಪ್ರಯತ್ನ ಮಾಡಿದ್ದಾರೆ. ನನ್ನ ಬಳಿ ಈ ಬಗ್ಗೆ ಎಲ್ಲ ಸಾಕ್ಷ್ಯಗಳೂ ಇವೆ. ನಾನು ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಏನೇ ಮಾತನಾಡಬೇಕಾದರೂ ಸುಮ್ಮನೆ ಮಾತನಾಡುವುದಿಲ್ಲ ಎಂದರು.

ಈ ಕಾರ್ಯಾಚರಣೆ ಸಿಎಂ ಆಗುವ ಮುನ್ನವೇ ಅಥವಾ ಸಿಎಂ ಆದ ಬಳಿಕ ನಡೆದಿದೆಯೇ ಎಂದು ಕೇಳಿದಾಗ, “ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಪ್ರಯತ್ನಗಳ ಬಗ್ಗೆ ಹೇಳುತ್ತಿದ್ದೇನೆ. ನನ್ನನ್ನು ಸೇರಿಸಿ ಬೇರೆ ಯಾವ, ಯಾವ ನಾಯಕರ ವಿರುದ್ಧ ಕಾರ್ಯಾಚರಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದೂ ತಿಳಿದಿದೆ. ಆದರೆ, ಈ ಎಲ್ಲ ವಿಚಾರಗಳನ್ನು ಈಗ ಬಹಿರಂಗವಾಗಿ ಮಾತನಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.sting operation dks dks 7

ತಮ್ಮ ವಿರುದ್ಧದ ಪ್ರಯತ್ನಗಳ ಹಿಂದೆ ಕರ್ನಾಟಕದವರೇ ಇದ್ದಾರೆಯೇ ಅಥವಾ ಬೇರೆ ರಾಜ್ಯದವರೂ ಇದ್ದಾರೆಯೇ ಎಂಬ ಬಗ್ಗೆ ಕೇಳಲಾಗಿ, “ನಾನು ನಿಮ್ಮ ಬಳಿ ಎಲ್ಲವನ್ನೂ ಬಹಿರಂಗಪಡಿಸಲು ಹೋಗುವುದಿಲ್ಲ. ಕಾಲ ಬಂದಾಗ ಉತ್ತರ ಕೊಡುತ್ತೇನೆ” ಎಂದು ಹೇಳಿದರು.

ಅಧಿಕಾರಿಗಳು, ಸಚಿವರಿಗೆ ಎಚ್ಚರಿಕೆಯಿಂದಿರಲು ಸೂಚನೆ

ಸಚಿವರನ್ನು ಸಿಕ್ಕಿ ಹಾಕಿಸಲು ಏಜೆಂಟರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಬಹಳ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಕೆಲವರು ನನ್ನ ಬಳಿ ಬಂದಿದ್ದರು, ನಾನು ಫೋಟೋಗಳನ್ನು ಬಿಡುಗಡೆ ಮಾಡಲು ಸಿದ್ಧ. ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತು. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ನನ್ನ ಬಳಿ ಯಾರು ಬಂದಿದ್ದರೋ ಅವರ ಮೇಲೆ ಅನುಮಾನ ಬಂದು ಪೊಲೀಸರಿಗೆ ತಿಳಿಸಿ, ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದೇನೆ. ಅದನ್ನು ಈಗಲೇ ಬಹಿರಂಗ ಮಾಡಲು ಸಾಧ್ಯವಿಲ್ಲ. ಇದಕ್ಕೆ ಪಿತಾಮಹರು ಯಾರು ಎಂದು ತಿಳಿದಿದೆ. ಅದಕ್ಕೆಲ್ಲಾ ಉತ್ತರಿಸಲು ಹೋಗುವುದಿಲ್ಲ. ಅಧಿಕಾರಿಗಳನ್ನು ಸುಮ್ಮನೆ ಸಿಕ್ಕಿಹಾಕಿಸಲು ಪ್ರಯತ್ನ ಮಾಡುತ್ತಿದ್ದು, ಅವರು ಹುಷಾರಾಗಿರಬೇಕು ಎಂದು ಎಚ್ಚರಿಕೆ ನೀಡಿದೆ. ಹಿಂದೆ ಮಾಧ್ಯಮದಿಂದ ಸ್ಟಿಂಗ್ ಆಪರೇಷನ್ ಮಾಡಲು ಬಂದಿದ್ದರು. ಹಾಗಾಗಿ ಈಗಲೇ ಎಚ್ಚರಿಕೆ ನೀಡಲಾಗಿದೆ. ಕೆಲವು ನಾಯಕರು ಈ ಕಾರ್ಯಾಚರಣೆಗೆ ಖಾಸಗಿ ಏಜೆಂಟರನ್ನು ನೇಮಕ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಪಕ್ಕಾ ಮಾಹಿತಿ ಇದೆ ಎಂದರು.

ಭಾರತೀಯರ ಮತಗಳನ್ನು ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ

ಎಸ್ ಐಆರ್ ಬಗ್ಗೆ ಕಳೆದ ಎರಡು ದಿನಗಳಿಂದ ಹೋರಾಟ ನಡೆದಿರುವ ಬಗ್ಗೆ ಕೇಳಿದಾಗ, “ಬಾಂಗ್ಲಾದೇಶ ಹಾಗೂ ಬೇರೆಡೆಗಳಿಂದ ಬಂದು ಜನರು ಇಲ್ಲಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಹಾಗಿದ್ದರೆ ದೇಶದ ಗಡಿಯಲ್ಲಿ ಬಾಂಗ್ಲಾದೇಶದಿಂದ ನುಸುಳಿಕೋರರನ್ನು ತಡೆಗಟ್ಟುವುದು ಕೇಂದ್ರ ಸರ್ಕಾರದ ಕರ್ತವ್ಯವಲ್ಲವೇ? ಬಿಜೆಪಿಯ ಸಂಸದರೂ ಹಾಗೂ ಶಾಸಕರು, ನಾವು ಬಾಂಗ್ಲಾದೇಶದವರನ್ನು ಮತಪಟ್ಟಿಯಿಂದ ತೆಗೆಯಲು ಅರ್ಜಿ ಸಲ್ಲಿಸಿದ್ದೇವೆ ಎಂದಿದ್ದಾರೆ. ಭಾರತೀಯರ ಮತಗಳ ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಮ್ಮಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದರೆ ಅವರ ಮತದಾನದ ಹಕ್ಕು ಕಸಿಯುವುದು ಮಾತ್ರವಲ್ಲ, ಅವರನ್ನೇ ದೇಶದಿಂದ ಹೊರಗೆ ಹಾಕಲಿ. ಆ ಕೆಲಸ ಯಾಕೆ ಮಾಡುತ್ತಿಲ್ಲ?” ಎಂದು ಪ್ರಶ್ನಿಸಿದರು.sting operation dks-dk shivakumar dks dk shivakumar

ಕೇಂದ್ರದಲ್ಲಿ ಪ್ರತಿಪಕ್ಷಗಳ ಹೋರಾಟದ ಬಗ್ಗೆ ಪೊಲೀಸರ ಕ್ರಮದ ಬಗ್ಗೆ ಕೇಳಿದಾಗ, “ಹೋರಾಟಗಾರರ ವಿರುದ್ಧ ಪೊಲೀಸರೂ ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರು ದೇಶದ  ಪ್ರಜಾಪ್ರಭುತ್ವ ಹಾಗೂ ಜನರ ರಕ್ಷಣೆಗಾಗಿ ಹೋರಾಡುತ್ತಿದ್ದಾರೆ” ಎಂದರು.

ಅರ್ಹ ಮತಗಳನ್ನು ಅಳಿಸಿಹಾಕದಂತೆ ಚುನಾವಣಾ ಆಯೋಗದ ಸ್ಪಷ್ಟ ಸೂಚನೆ*

“ರಾಜ್ಯದಲ್ಲಿ ಬಿಜೆಪಿಯವರು ತಮ್ಮ ಬಡ ಬಿಜೆಪಿ ಕಾರ್ಯಕರ್ತರ ಹೆಸರಿನಲ್ಲಿ ಪೂರ್ವಮುದ್ರಿತ ಫಾರಂ 7 ಗಳನ್ನು ನೀಡುತ್ತಿದ್ದಾರೆ. ವಿಶೇಷವಾಗಿ ಅಲ್ಪಸಂಖ್ಯಾತ ಮತದಾರರ ಪೂರ್ವ ಮುದ್ರಿತ ಅರ್ಜಿಗಳನ್ನು ಲಕ್ಷಾಂತರ ಸಂಖ್ಯೆಯಲ್ಲಿ ಸಲ್ಲಿಸಲಾಗುತ್ತಿದೆ. ಕೆಲವು ಬಿಜೆಪಿ ಕಾರ್ಯಕರ್ತರು ತಪ್ಪೊಪ್ಪಿಗೆ ಮಾಡಿಕೊಂಡು ಅರ್ಜಿಗಳನ್ನು ವಾಪಸ್ಸು ಪಡೆದಿದ್ದಾರೆ. ಕೇಂದ್ರ ಸರ್ಕಾರದವರು ಈ ಮತಗಳ್ಳತನವನ್ನು ಒಂದು ದೊಡ್ಡ ಕ್ರಿಮಿನಲ್ ಸಂಚು ಎಂದು ಏಕೆ ಪರಿಗಣಿಸಲಿಲ್ಲ? ರಾಜ್ಯದಲ್ಲಿ ನಮ್ಮ ಹೋರಾಟದ ನಂತರ ಚುನಾವಣಾ ಆಯೋಗವೂ,  ಸೂಕ್ತ ಪರಿಶೀಲನೆಯಿಲ್ಲದೇ ಯಾವುದೇ ಅರ್ಹ ಮತವನ್ನು ತೆಗೆದುಹಾಕಬಾರದೆಂದು ಸ್ಪಷ್ಟ ಸೂಚನೆ ನೀಡಿದೆ. ನಾವು ಆ ಹೋರಾಟ ಮಾಡದೇ ಇದ್ದಿದ್ದರೆ, ಬಡ ಹಳ್ಳಿಗರು, ಅನಕ್ಷರಸ್ಥರ ಮತಗಳನ್ನು ಡಿಲೀಟ್ ಮಾಡಲಾಗುತ್ತಿತ್ತು. ಈಗ ಚುನಾವಣಾ ಆಯೋಗವು, ದೇಶಾದ್ಯಂತ ಯಾವುದೇ ವಸತಿಯಿಲ್ಲದವರು, ಶೋಷಿತರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಒಂದು ತಿಂಗಳ ಕಾಲ ಅಭಿಯಾನದ ರೀತಿಯಲ್ಲಿ ಮತಗಳ ರಕ್ಷಣೆ ಮಾಡಬೇಕೆಂದು ತಿಳಿಸಿದೆ ಎಂದರು.

ಮುಖ್ಯಮಂತ್ರಿಯಾಗಿ ರಾಜ್ಯದ ಪ್ರತಿಯೊಬ್ಬರ ಮತರಕ್ಷಣೆ ನನ್ನ ಕರ್ತವ್ಯ

“ಮತಗಳನ್ನು ರಕ್ಷಿಸುವ ಕಾರ್ಯವು ಬೆಂಗಳೂರಿನಿಂದ ಪ್ರಾರಂಭವಾಗಿದ್ದು, ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ರಾಜ್ಯದ ಪ್ರತಿ ನಾಗರಿಕನ ಮತದ ಹಕ್ಕನ್ನು ರಕ್ಷಿಸುವುದು ಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯವಲ್ಲವೇ? ಬಿಜೆಪಿಯವರು ಮತಗಳ್ಳತನ ಮಾಡಲು ಇಂತಹ ಹಂತಕ್ಕೆ ತಲುಪುವರೆಂಬ ಕಲ್ಪನೆ ನಮಗಿರಲಿಲ್ಲ. ಚುನಾವಣೆ ಗೆಲ್ಲಲು ಮೊದಲು ರಾಜ್ಯದ ಹಾಗೂ ದೇಶದ ಜನರ ಮನಸ್ಸನ್ನು ಗೆಲ್ಲಬೇಕು. ಆದರೆ ಬಿಜೆಪಿಯವರು ಚುನಾವಣಾ ಆಯೋಗದ ವ್ಯವಸ್ಥೆಯನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದರು.

ಮತದಾನ ಹಕ್ಕಿಗೆ ಹೋರಾಡುತ್ತಿರುವ ಇಂಡಿಯಾ ಬ್ಲಾಕ್ ನ ನಾಯಕರನ್ನು ಅಭಿನಂದಿಸುತ್ತೇನೆ

“ರಾಜ್ಯದಲ್ಲಿ ನಡೆಯುತ್ತಿರುವ ಈ ಮತಗಳ ಅಕ್ರಮದ ಬಗ್ಗೆ ವಿಚಾರಿಸಲು ಸರ್ಕಾರಕ್ಕೆ ಅಧಿಕಾರವಿಲ್ಲವೇ? ಇಂತಹ ಕ್ರಿಮಿನಲ್ ಸಂಚಿನ ವಿರುದ್ಧ ನಾವು ಧ್ವನಿಯೆತ್ತಿದ್ದು, ಮಾಧ್ಯಮಗಳೂ ನಮಗೆ ಸಹಕರಿಸಿವೆ. ಈ ಮೂಲಕ ಮಾಧ್ಯಮದವರು ಅರ್ಹಮತದಾರರ ನೆರವಿಗೆ ನಿಂತಿದ್ದಾರೆ. ಆದ್ದರಿಂದ ನವದೆಹಲಿಯಲ್ಲಿ ದೇಶದ ಮತದಾರನ ಹಿತರಕ್ಷಣೆಗೆ ಹೋರಾಡುತ್ತಿರುವ  ಇಂಡಿಯಾ ಬ್ಲಾಕ್ ನ ನಾಯಕರಿಗೆ ನಾನು ಅಭಿನಂದಿಸುತ್ತೇನೆ. ಇದರಿಂದ ದೇಶದ ಪ್ರಜಾಪ್ರಭುತ್ವ ಹಾಗೂ ಮತಗಳನ್ನು ರಕ್ಷಿಸಲಾಗುತ್ತಿದೆ” ಎಂದರು.

ಇಂದು ಭಾರತೀಯ ಪ್ರಜಾಪ್ರಭುತ್ವದ ಕಪ್ಪು ದಿನ

“ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ದಬ್ಬಾಳಿಕೆ ನಡೆದಿದ್ದು, ಇಂದು ‘ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ’ ಎಂದು ಪಕ್ಷ ಘೋಷಿಸಿದೆ. ಇದೊಂದು ಕರಾಳ ದಿನವಾಗಿದ್ದು, ಇಡೀ ದೇಶದ ಪ್ರಜಾಪ್ರಭುತ್ವ ಉಳಿಸಲು ಈ ಹೋರಾಟ ಮಾಡಿದೆ. ನಾನು ಅಲ್ಲಿ ಭಾಗವಹಿಸಬೇಕಿತ್ತು. ಜಿ.ಎಸ್.ಟಿ ಸಭೆಯಲ್ಲಿ ಭಾಗವಹಿಸಬೇಕಿದ್ದರಿಂದ ಭಾಗವಹಿಸಲಾಗಲಿಲ್ಲ” ಎಂದರು.

ಕಾನೂನು ಚೌಕಟ್ಟಿನಲ್ಲಿ ಪ್ರಜಾಪ್ರಭುತ್ವ ಉಳಿಸುತ್ತೇನೆ

ಎಸ್.ಐ ಆರ್. ಕುರಿತು ಕೇಳಿದಾಗ, “ನಾನು ಜಿ ಎಸ್ ಟಿ ಸಭೆಗೆ ಪಾಲ್ಗೊಳ್ಳಲು ಆಗಮಿಸಿದ್ದು, ನಮ್ಮ ರಾಜ್ಯದಲ್ಲಿ ಎಸ್ ಐ ಆರ್ ಕುರಿತ ಸಂಪೂರ್ಣ ಮಾಹಿತಿ ತಿಳಿಸಲು ದಾಖಲೆಗಳನ್ನು ನಮ್ಮ ನಾಯಕರಿಗೆ ಒಪ್ಪಿಸಲಾಗುವುದು. ಅವರೆಲ್ಲಾ ಸದ್ಯಕ್ಕೆ ಬಿಡುವಿಲ್ಲದಿರುವುದರಿಂದ ಗೋವಾದಲ್ಲಿ ನಡೆಯಲಿರುವ ಪಕ್ಷದ ಸಭೆಗೆ ಹೋಗಿ ದಾಖಲೆಗಳನ್ನು ಸಲ್ಲಿಸುತ್ತೇನೆ. ನಂತರ ನಾಯಕರ ಸೂಚನೆ ಮೇರೆಗೆ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.against dks1

“ಕೇಂದ್ರ ಸಚಿವರು ಸೇರಿದಂತೆ ಎನ್ಡಿಎ ನೈಯಕರು ರಾಜ್ಯಪಾಲರ ಕಚೇರಿಗೆ ಹೋಗಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡುವ ಹಕ್ಕಿಲ್ಲ ಎಂದು ಹೇಳುತ್ತಿರುವುದೇಕೆ? ಇದು ಕ್ರಿಮಿನಲ್ ಚಟುವಟಿಕೆಯಲ್ಲವೇ? ಕೊಲೆಯಾಗುವ ಮುನ್ನ ನಾವು ಕೊಲೆಯನ್ನು ತಪ್ಪಿಸಿದ್ದೇವೆ. ರಾಜ್ಯಪಾಲರ ಕಚೇರಿಗೆ ತೆರಳಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ರಾಜ್ಯಪಾಲರು ನಮ್ಮ ಅಧಿಕಾರಿಗಳಿಗೆ ಕರೆ ಮಾಡಿ ಪ್ರಕರಣ ದಾಖಲಿಸುತ್ತಿರುವುದೇಕೆ ಎಂದು ಕೇಳಿದ್ದಾರೆ. ಇಲ್ಲಿ ನಡೆದಿರುವುದು ಅಪರಾಧವಲ್ಲವೇ? ರಾಜ್ಯದ ಮುಖ್ಯಮಂತ್ರಿಯಾಗಿ ಮತದಾರರ ಹಕ್ಕು ಉಳಿಸುವುದು ನನ್ನ ಕರ್ತವ್ಯವಲ್ಲವೇ? ಬಿಜೆಪಿ ನಾಯಕರು ಇಂತಹ ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ನಿರೀಕ್ಷಿಸಿರಲಿಲ್ಲ. ಬಿಜೆಪಿಗರು ಜನರ ಹೃದಯ ಗೆದ್ದು ಚುನಾವಣೆ ಗೆಲ್ಲಬೇಕು. ಅದನ್ನು ಬಿಟ್ಟು ಚುನಾವಣಾ ಆಯೋಗ ಮೂಲಕ ಇಂತಹ ಅಕ್ರಮ ಮಾಡುತ್ತಿದೆ. ರಾಜ್ಯದಲ್ಲಿ ಇಷ್ಟು ಅಕ್ರಮ ನಡೆಯುತ್ತಿರುವಾಗ ಅಗತ್ಯ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ಬದುಕಿರುವವರನ್ನು ಸತ್ತಿದ್ದಾರೆ ಎಂದು ಸುಳ್ಳು ಹೇಳಿ ಮತದಾನದ ಹಕ್ಕು ಕಸಿಯುವುದು ಅಕ್ರಮವಲ್ಲವೇ? ಇದು ಅಪರಾಧ ಪಿತೂರಿಯಾಗಿದೆ. ಅಮಾಯಕ ಬಿಜೆಪಿ ಕಾರ್ಯಕರ್ತರಿಗೆ ಈ ಕೆಲಸ ಒಪ್ಪಿಸಿರುವುದು. ಬಿಜೆಪಿ ಕಾರ್ಯಕರ್ತರು ಎಲ್ಲಿ ತಮ್ಮ ಹೆಸರು ಬಯಲು ಮಾಡುತ್ತಾರೋ ಎಂದು ಹೆದರಿದ್ದಾರೆ.ಈ ಬಗ್ಗೆ ತನಿಖೆ ಮಾಡಿಸಿ ಕಾನೂನಿನ ರೀತ್ಯಾ ಕ್ರಮ ಕೈಗೊಂಡು ಪ್ರಜಾಪ್ರಭುತ್ವ ಉಳಿಸುತ್ತೇನೆ” ಎಂದರು.

ದೇಶದ ಅತಿದೊಡ್ಡ ಕುತಂತ್ರ

“ಮತದಾರರ ಹೆಸರುಗಳನ್ನು ಅಳಿಸಿಹಾಕಲು ನಡೆಸಿರುವ ಪ್ರಯತ್ನ ದೇಶದ ಅತಿ ದೊಡ್ಡ ಕುತಂತ್ರವಾಗಿದೆ. ಮತದಾನದ ಹಕ್ಕು ಬದುಕಿನ ಹಕ್ಕಾಗಿದೆ. ವಿರೋಧ ಪಕ್ಷದ ನಾಯಕರಾಗಿ ಪ್ರತಿ ಮತದಾನವನ್ನು ಉಳಿಸುವುದು ರಾಹುಲ್ ಗಾಂಧಿ ಅವರ ಕರ್ತವ್ಯವಾಗಿದೆ. ದೇಶದಲ್ಲಾಗಿರುವ ಮತಗಳ್ಳತನದ ಬಗ್ಗೆ ಚುನಾವಣಾ ಆಯೋಗದ ಸದಸ್ಯರಿಂದ ಈಗಾಗಲೇ ಬಹಿರಂಗಗೊಂಡಿದೆ. ನ್ಯಾಯಾಲಯಗಳೂ ಕೂಡ  ಇದನ್ನು ಒಪ್ಪಿದ್ದು, ನ್ಯಾಯವನ್ನು ಎತ್ತಿ ಹಿಡಿದಿರುವುದಕ್ಕಾಗಿ ನಾನು ಅಭಿನಂದಿಸುತ್ತೇನೆ. ಕರ್ನಾಟಕದಲ್ಲಿ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಮೂನೆ-7 ಅರ್ಜಿಗಳನ್ನು ಮುದ್ರಣ ಮಾಡಲಾಗಿದೆ. ದಲಿತ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮತದಾರರ ಹೆಸರು ಹಾಗೂ ವಿಳಾಸ ನಮೂದಿಸಿ ಸ್ಥಳೀಯ ಬಿಜೆಪಿ ನಾಯಕರಿಗೆ ನಮೂನೆ -7 ನೀಡಲಾಗಿದೆ. ಅರ್ಜಿಗಳನ್ನು ನೀಡಿದವರ ಐಡಿ ಕಾರ್ಡ್ , ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಈ ಬಗ್ಗೆ ದೂರು ನೀಡಿದ ಬೆನ್ನಲ್ಲೆ ಬಿಎಲ್ಒ ಗಳನ್ನು ಬೆದರಿಸಿ ಅರ್ಜಿಗಳನ್ನು ವಾಪಸ್ಸು ಪಡೆದಿದ್ದಾರೆ” ಎಂದರು.

ಜಿ ಎಸ್ ಟಿ ಮಂಡಳಿ ಸಭೆ: ರಾಜ್ಯದ ಹಿತದೃಷ್ಟಿಯಿಂದ ಪ್ರಸ್ತಾವನೆ ಸಲ್ಲಿಕೆ

ಕಳೆದ ಮೂರು ದಿನಗಳಿಂದ ಜಿ ಎಸ್ ಟಿ ಮಂಡಳಿ ಸಭೆ ನಡೆಯುತ್ತಿತ್ತು. ಇಂದಿನ ಸಭೆಯಲ್ಲಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಾರೆ. ಇಂದು  ನಾನು ಹಾಗೂ ಸಚಿವ ಕೃಷ್ಣ ಬೈರೇಗೌಡರು ಸಭೆಯಲ್ಲಿ  ಭಾಗವಹಿಸುತ್ತಿದ್ದೇವೆ. ಬೆಂಗಳೂರಿನಲ್ಲಿಯೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ನಿನ್ನೆಯೂ ಸಭೆ ನಡೆಸಿ ನಮ್ಮ ನಿಲುವೇನು ಎಂದು ತಿಳಿಸಿದ್ದು, ತೆಲಂಗಾಣ ಸೇರಿದಂತೆ ಇತರೆ ರಾಜ್ಯಗಳ ಅಭಿಪ್ರಾಯ ತಿಳಿಸಲಾಗಿದೆ. ಅಧಿಕಾರಿಗಳು ಕೂಡ ಪ್ರಮುಖ ವಿಚಾರಗಳನ್ನು ತಿಳಿಸಿದ್ದು,  ರಾಜ್ಯದ ಹಿತದೃಷ್ಟಿಯಿಂದ ಪ್ರಸ್ತಾವನೆ ಮಾಡಲಿದ್ದೇನೆ ಎಂದರು.Minister jk02_new jk02 new

 

English Summary
Title

Sting Operation in Karnataka: Allegations Against CM D.K. Shivakumar Exploded

Short Description
Karnataka’s political landscape is tense following explosive allegations regarding a high-profile sting operation targeting ministers. While opponents point fingers at Chief Minister D.K. Shivakumar, labeling him the mastermind, the CM has firmly denied the claims. Instead, Shivakumar countered by warning his cabinet colleagues that private agencies, potentially backed by central investigators, are attempting to secretly record leaders. Meanwhile, Union Minister H.D. Kumaraswamy accused the CM of using sting tactics for political leverage, a claim the Congress party dismisses as entirely baseless. The identity of the true mastermind remains a highly contested political dispute.
Keywords
sting operation, against, Minister, and, me, CM, D.K. Shivakumar.