Friday, October 9, 2026

BDA Apartments

Home Front Page ‘ಮೈಸೂರಿನಲ್ಲಿ ಸ್ವಚ್ಛತಾ ಹಿ ಸೇವಾ’ ಅಭಿಯಾನ: ಅಧಿಕಾರಿಗಳು, ವಕೀಲರು,ಪಾಲಿಕೆ ಸಿಬ್ಬಂದಿ ಭಾಗಿ

‘ಮೈಸೂರಿನಲ್ಲಿ ಸ್ವಚ್ಛತಾ ಹಿ ಸೇವಾ’ ಅಭಿಯಾನ: ಅಧಿಕಾರಿಗಳು, ವಕೀಲರು,ಪಾಲಿಕೆ ಸಿಬ್ಬಂದಿ ಭಾಗಿ

ಮೈಸೂರು, ಅಕ್ಟೋಬರ್ 9, 2026 (www.justkannada.in): ಮೈಸೂರು ನಗರದ ನ್ಯಾಯಾಂಗ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಹಳೆಯ ನ್ಯಾಯಾಲಯ ಸಂಕೀರ್ಣ ಮತ್ತು ಜಯನಗರದ ಮಳಲವಾಡಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ  ಬಿ. ಜಯಂತ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ., ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಸಿವಿಲ್ ನ್ಯಾಯಾಧೀಶರು ಹಾಗೂ ಇತರ ನ್ಯಾಯಾಂಗ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

‘ಸ್ವಚ್ಛತಾ ಲಾಂಛನ’ ಅನಾವರಣ

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ ಕುಮಾರ್ ಅವರು ಮೈಸೂರು ಮಹಾನಗರ ಪಾಲಿಕೆಯ ನೂತನ ಸ್ವಚ್ಛತಾ ಲಾಂಛನವನ್ನು ಅನಾವರಣಗೊಳಿಸಿದರು.

ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಮೈಸೂರು ನಿರ್ಮಾಣದ ಸಂಕಲ್ಪವನ್ನು ಪ್ರತಿಬಿಂಬಿಸುವ ಈ ಲಾಂಛನವು ನಗರದ ಸ್ವಚ್ಛತಾ ಅಭಿಯಾನಗಳಿಗೆ ವಿಶಿಷ್ಟ ಗುರುತು ನೀಡುವುದರ ಜೊತೆಗೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.'Swachhata Hi Seva' campaign cleaness

‘ಸ್ವಚ್ಛ ಮೈಸೂರು – ನಮ್ಮ ಹೆಮ್ಮೆ, ನಮ್ಮ ಆದ್ಯತೆ’ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವ ಆಶಯದೊಂದಿಗೆ ಲಾಂಛನವನ್ನು ಅನಾವರಣಗೊಳಿಸಲಾಯಿತು. ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

ಸ್ವಚ್ಛತಾ ಪ್ರತಿಜ್ಞೆ, ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ

ಕಾರ್ಯಕ್ರಮದ ಸಂದರ್ಭದಲ್ಲಿ ನ್ಯಾಯಾಂಗ ಅಧಿಕಾರಿಗಳು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕರಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು.

ಘನತ್ಯಾಜ್ಯ ನಿರ್ವಹಣಾ ನಿಯಮಗಳು–2026 ಕುರಿತು ಮಾಹಿತಿ ವಿನಿಮಯ ನಡೆಸಿ, ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದಲ್ಲಿ ನಾಗರಿಕರ ಪಾತ್ರದ ಕುರಿತು ಜಾಗೃತಿ ಮೂಡಿಸಲಾಯಿತು.'Swachhata Hi Seva' campaign mysore-city-corporation mysore city corporation

ಸ್ವಚ್ಛತೆ ಒಂದು ದಿನದ ಅಭಿಯಾನಕ್ಕೆ ಸೀಮಿತವಾಗದೆ, ಪ್ರತಿಯೊಬ್ಬರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಕಾರ್ಯದರ್ಶಿಎ.ಜಿ. ಸುಧೀರ್ ಹಾಗೂ ಸಂಘದ ಸದಸ್ಯರು, ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿಗಳು, ನ್ಯಾಯಾಲಯ ವ್ಯವಸ್ಥಾಪಕರು, ಶಿರಸ್ತೇದಾರರು, ಅಟೆಂಡರ್‌ಗಳು, ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ–2 ಮತ್ತು 3ರ ಸಹಾಯಕ ಆಯುಕ್ತರು, ಕಾರ್ಯಪಾಲಕ ಅಭಿಯಂತರರು (ಪರಿಸರ), ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ), ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.Mysuru jk02_new jk02 new

ಪಾಲಿಕೆಯ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಬಳಸಿಕೊಂಡು ಎರಡೂ ನ್ಯಾಯಾಲಯ ಸಂಕೀರ್ಣಗಳ ಆವರಣಗಳಲ್ಲಿ ಸಮಗ್ರ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಯಿತು. ಸಂಗ್ರಹವಾಗಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ನಿರ್ಮಿಸಲು ಆದ್ಯತೆ ನೀಡಲಾಯಿತು.

 

English Summary
Title

Mysuru Law Courts Join Swachhata Hi Seva Cleanliness Campaign

Short Description
The Swachhata Hi Seva campaign in Mysuru recently brought together civic officials, judicial officers, and the Mysuru Bar Association for an intensive city-wide cleanliness drive. Legal professionals, lawyers, and administrative staff actively volunteered to clean the Mysuru Law Courts Complex, emphasizing public health, civic responsibility, and sustainable waste management. Led by local government authorities, this joint initiative highlights Mysuru’s ongoing commitment to urban sanitation and the national Swachh Bharat mission. By fostering community participation, local officials and the legal fraternity aim to maintain Mysuru's reputation as one of India's cleanest cities.
Keywords
'Swachhata Hi Seva' campaign, Mysuru, Officials, lawyers, participate.