ಹುಬ್ಬಳ್ಳಿ,ಅಕ್ಟೋಬರ್15,2026 (): ಕಬ್ಬಿಗೆ ನ್ಯಾಯಯುತ ದರ (ಎಫ್ಆರ್ಪಿ) ನಿಗದಿ ಹಾಗೂ ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ (MSP) ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಕಬ್ಬು ಬೆಳೆಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಸ್ತೆಯಲ್ಲಿ ಕೂತು ಪ್ರತಿಭಟನೆ ನಡೆಸಸುವ ಅವಶ್ಯಕತೆ ಇಲ್ಲ. ನಿಮ್ಮ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಹೀಗಾಗಿ ಪ್ರತಿಭಟನೆಯನ್ನು ಕೈಬಿಡಿ ಎಂದು ಮನವಿ ಮಾಡಿದರು.
ಹುಬ್ಬಳ್ಳಿಯಲ್ಲಿ ಬೆಳಗಾವಿ ಜಿಲ್ಲೆ, ಮಂಡ್ಯ ಹಾವೇರಿ, ಕೊಪ್ಪಳ, ಧಾರವಾಡದಲ್ಲೂ ರೈತರು ಪ್ರತಿಭಟನೆ ನಡೆಸಿ ಎಫ್ಆರ್ಪಿ, ಎಂಎಸ್ ಪಿ ದರ ನಿಗದಿಗೆ ಆಗ್ರಹಿಸಿದ್ದರು.






