ಬೆಂಗಳೂರು,ಅಕ್ಟೋಬರ್,16,2026 (www.justkannada.in): ರಾಜ್ಯದ ನೂತನ ರಾಜ್ಯಪಾಲರಾಗಿ ಡಾ ಸುಧಾ ಯಾದವ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ನೂತನ ರಾಜ್ಯಪಾಲರಾಗಿ ಡಾ ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ. ಮಾಡಿದರು. ಡಾ ಸುಧಾ ಅವರಿಗೆ ಹೈಕೋರ್ಟ್ ಸಿಜೆ ವಿಭು ಬಖ್ರು. ಅವರು ಪ್ರಮಾಣ ವಚನ ಬೋಧಿಸಿದರು.
ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಡಿಕೆ ಶಿವಕುಮಾರ್, ಡಿಸಿಎಂ ಪರಮೇಶ್ವರ್, ವಿಪಕ್ಷ ನಾಯಕ ಅಶೋ,ಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಚಿವರು ಶಾಸಕರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 
ಕಾರ್ಗಿಲ್ ಹುತಾತ್ಮ ಯೋಧನ ಪತ್ನಿಯಾಗಿರುವ ಸುಧಾ ಯಾದವ್ ರಸಾಯನಶಾಸ್ತ್ರದಲ್ಲಿ ಪಿಎಚ್ಡಿ ಪಡೆದಿದುಕೊಂಡಿದ್ದು, ಮಾಜಿ ಲೋಕಸಭಾ ಸಂಸದೆಯಾಗಿದ್ದು, ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಪ್ರಮುಖ ಸದಸ್ಯೆಯಾಗಿದ್ದಾರೆ.







