ಮೈಸೂರು,ಅಕ್ಟೋಬರ್,16,2026 (www.justkannada.in): ಸ್ಲೀಪರ್ಕೋಚ್ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಕೀರನಹಳ್ಳಿ ಗೇಟ್ ಬಳಿ ನಡೆದಿದೆ.
ಬಸ್ ಚಾಲಕ ಸುನೀಲ್ ಹಾಗೂ ಕ್ಲೀನರ್ ಸಗೇಶ್ (36) ಮತ್ತು ಕೇರಳ ಮೂಲದ ಪ್ರಯಾಣಿಕ ಅಫ್ತಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕನ ಹೆಸರು ಸದ್ಯಕ್ಕೆ ತಿಳಿದು ಬಂದಿಲ್ಲ. ಇಂದು ಮುಂಜಾನೆ 3.30 ರ ಸುಮಾರಿನಲ್ಲಿ ಈ ಘಟನೆ ಸಂಭವಿಸಿದೆ.
ರಾತ್ರಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ರಸ್ತೆ ನಡುವೆ ಮರ ಬಿದ್ದಿತ್ತು. ಲಾರಿ ಚಾಲಕ ಅಲ್ಲಿಗೆ ಬಂದಾಗ ಮರ ಬಿದ್ದಿರುವುದು ಗಮನಿಸಿ ನಿಧಾನವಾಗಿ ಲಾರಿಯನ್ನು ಪಕ್ಕಕ್ಕೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಅತೀ ವೇಗವಾಗಿ ಬರುತ್ತಿದ್ದ ಖಾಸಗಿ ಸ್ಲೀಪರ್ಕೋಚ್ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಚಾಲಕ, ಕ್ಲೀನರ್ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೇ 20ಮಂದಿಗೆ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಿರಿಯಾಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Terrible accident, between, bus ,lorry, Four dead, Mysore






