ಬೆಂಗಳೂರು,ಅಕ್ಟೋಬರ್,16,2026 (www.justkannada.in): ಸ್ಟಿಂಗ್ ಆಪರೇಷನ್ ಕುರಿತು ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಹೆಚ್ ಡಿಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ. ನಾನು ಯಾವುದಕ್ಕೂ ಉತ್ತರ ಕೊಡಲ್ಲ. ಕಾಲವೇ ಉತ್ತರಿಸುತ್ತೇ. . ಗೃಹ ಇಲಾಖೆಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದೇವೆ. ಅವರು ನೋಡುತ್ತಾರೆ ಎಂದರು.
ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ಇದೆ ನಾನು ಹೋಗುತ್ತಿದ್ದೇನೆ. ಇಂದು ಖುಷಿಯ ದಿನ ನೂತನ ರಾಜ್ಯಪಾಲರು ಅಧಿಕಾರ ಸ್ವೀಕರಿಸಿದ್ದಾರೆ. ನಿಕಟಪೂರ್ವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬೀಳ್ಕೊಡುಗೆ ನೀಡಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.







