Monday, September 21, 2026

BDA Apartments

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವೆಡೆ ಧರೆಗುರುಳಿದ ಮರಗಳು… BDA JK...
Home Front Page ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವೆಡೆ ಧರೆಗುರುಳಿದ ಮರಗಳು…

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಹಲವೆಡೆ ಧರೆಗುರುಳಿದ ಮರಗಳು…

ಬೆಂಗಳೂರು,ಮೇ,17,2019(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದ್ದು, ನಗರದ  ಹಲವು ಭಾಗಗಳಲ್ಲಿ ಮರಗಳು ಧರೆಗೆ ಉರುಳಿವೆ, ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.

ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ,  ವಿಲ್ಸನ್ ಗಾರ್ಡನ್, ಮಾನ್ಯತಾ ಟೆಕ್ ಪಾರ್ಕ್, ಕೆ ಆರ್ ಮಾರುಕಟ್ಟೆ, ನಿಮ್ಹಾನ್ಸ್, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಾನ್ಯತಾ ಟೆಕ್ ಪಾರ್ಕ್, ವಿಲ್ಸನ್ ಗಾರ್ಡನ್ ಮತ್ತು ಜಯನಗರದಲ್ಲಿ ಮರ ಧರೆಗುರುಳಿವೆ ಎಂಬ ಮಾಹಿತಿ ಲಭ್ಯವಾಗಿದೆ

ಜಯನಗರದ 13ನೇ ಕ್ರಾಸ್ ಬಳಿ ಭಾರಿ ಮಳೆಯಿಂದಾಗಿ  ಪಾರ್ಕ್ ಮಾಡಿದ್ದ ಕಾರಿನ ಮೇಲೆಯೇ ಮರ ಉರುಳಿ ಬಿದ್ದಿದೆ. ವಾಹನ ಸಂಚಾರಕ್ಕೆ ತಡೆಯುಂಟಾಗಿ, ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತಾಗಿದೆ. ಮೈಸೂರು ರಸ್ತೆ, ಡೈರಿ ಸರ್ಕಲ್ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

 

Key words: Heavy rain in Bangalore.

#Bangalore #Heavyrain  #tree  #trafficjams