ಬೆಂಗಳೂರು, ಅಕ್ಟೋಬರ್, 22,2026 (www.justkannada.in): ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಬರದ ಛಾಯೆ ಆವರಿಸಿದೆ. ಈ ಸಂಬಂಧ ಬರ ಪರಿಹಾರ ಸಂಬಂಧ ಕೇಂದ್ರ ಸರ್ಕಾರಕ್ಕೆ ಡಿಸಿಎಂ ಪರಮೇಶ್ವರ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಡಿಸಿಎಂ ಪರಮೇಶ್ವರ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪತ್ರದಲ್ಲಿ ಬರ ಬರಪೀಡಿತ ತಾಲ್ಲೂಕುಗಳ ವಿವರ ಬೆಳೆ ನಷ್ಟದ ಬಗ್ಗೆ ವಿವರಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದಲ್ಲಿ ಬರದಿಂದ ಸುಮಾರು 60 ಸಾವಿರ ಕೋಟಿ ರೂ. ನಷ್ಟವಾಗಿದೆ. ಎನ್ ಡಿಆರ್ ಎಫ್ ಮಾರ್ಗಸೂಚಿಗಳ ಪ್ರಕಾರ ಬರಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು.
Drought relief, Letter, Central Government. DCM, Parameshwara






