ಕಾಸರಗೂಡು, ಅಕ್ಟೋಬರ್,24,2026 (www.justkannada.in): ಹೊರನಾಡ ಕನ್ನಡಿಗರಿಗೆ ಶಿಕ್ಷಣ, ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುವೆಂಪು ಪ್ರತಿಷ್ಠಾನ, ಮಂಜೇಶ್ವರ , ತುಳು ಭವನ, ಬದಿಯಡ್ಕ, ಕಾಸರಗೋಡು ಇಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್, ಮಂಜೇಶ್ವರದ ಸಂಯುಕ್ತ ಆಶ್ರಯದಲ್ಲಿ ತುಳುರತ್ನ ಬಹುಭಾಷಾ ವಿದ್ವಾಂಸ ಡಾ. ಪಿ. ವೆಂಕಟರಾಜ ಪುಣಿಂಚಿತ್ತಾಯರ(ಪುವೆಂಪು) ಜನ್ಮ ದಿನಾಚರಣೆಯ ಅಂಗವಾಗಿ ಪುವೆಂಪು ನೆನಪು 2026 ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಂಜೇಶ್ವರ ಶಾಸಕ ಎ.ಕೆ.ಎಂ. ಆಶ್ರಫ್ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್ ಉದ್ಘಾಟಿಸಿದರು. ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಮತ್ತು ಗಿಳಿವಿಂಡು ಪ್ರತಿಷ್ಠಾನದ ಅಧ್ಯಕ್ಷ ಡಾ ವೀರಪ್ಪ ಮೊಯ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಅವರಿಗೆ ‘ಪುವೆಂಪು ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಹಿರಿಯ ಸಾಹಿತಿ ರಮಾನಂದ ಬನಾರಿ, , ಗಡಿ ಪ್ರಾಧಿಕಾರ ಸದಸ್ಯ ಅಶೋಕ್ ಚಂದರಗಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್. ಚನಿಯಪ್ಪ ನಾಯ್ಕ, ರಾಜ್ಯ ಕಾರ್ಮಿಕ ಇಲಾಖೆ ಕನಿಷ್ಠ ವೇತನ ಆಯೋಗದ ಅಧ್ಯಕ್ಷ ರವಿ ನಾಯ್ಕಾಪು, ರವೀಶ ತಂತ್ರಿ ರವಿನಾರಾಯಣ ಭಟ್ ಹಾಗೂ ಇನ್ನೂ ಮುಂತಾದ ಕನ್ನಡ ಪರ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು, ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.






