ಚಾಮರಾಜನಗರ, ಅಕ್ಟೋಬರ್,28,2026 (www.justkannada.in): ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. 
ನೀರಾವರಿ ಇಲಾಖೆ ಇಇ ಉಮೇಶ್ ಕಾರು ಚಾಲಕನಾಗಿದ್ದ ಲೋಕೇಶ್ ಆತ್ಮಹತ್ಯೆಗೆ ಶರಣಾದವರು.. ಲೋಕೇಶ್ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಏಕಾಏಕಿ ಕೆಲಸದಿಂದ ತೆಗೆದು ಹಾಕಲಾಗಿತ್ತು.
ಈ ಹಿನ್ನಲೆಯಲ್ಲಿ ಮಾನಸಿಕವಗಿ ಲೋಕೇಶ್ ಖೀನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಲೋಕೇಶ್ ಕುಟುಂಬಸ್ಥರು ನ್ಯಾಯಕ್ಕಾಗಿ ಇಇ ಉಮೇಶ್ ಬಳಿ ಹೋಗಿದ್ದರು. ಈ ವೇಳೆ ಇಇ ಉಮೇಶ್ ಅವಾಚ್ಯ ಶಬ್ದದಿಂದ ನಿಂದಿಸಿದ ಆರೋಪ ಕೇಳಿಬಂದಿತ್ತು. ಇದರಿಂದ ಮನನೊಂದು ಲೋಕೇಶ್ ಮನಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಲೋಖೇಶ್ ಸಾವಿಗೆ ಇಇ ಉಮೇಶ್ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






