ಬೆಂಗಳೂರು, ಅಕ್ಟೋಬರ್,28,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, ಮತದಾರರ ತೀರ್ಪನ್ನು ಗೌರವದಿಂದ ಸ್ವೀಕಾರ ಮಾಡುತ್ತೇವೆ. ಪಕ್ಷದ ಅಭ್ಯರ್ಥಿಗಳ ಪರ ಹೆಚ್ಚು ಮತ ಬಂದಿದೆ. ಒಂದು ಸ್ಥಾನದಲ್ಲಿ ಗೆಲುವು ನಿರೀಕ್ಷೆ ಇತ್ತು, ಆದರೂ ಜನರು ನೀಡಿರುವ ಸಂದೇಶವನ್ನು ನಾವು ಸ್ವೀಕರಿಸುತ್ತೇವೆ. ಪರಿಷತ್ ಚುನಾವಣೆ ಸೋಲಿನ ಪರಾಮರ್ಶೆ ಮಾಡುತ್ತೇವೆ ಎಂದರು.
ವಿಧಾನಪರಿಷತ್ ಚುನಾವಣಾ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂಬವ ವಿಪಕ್ಷಗಳ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ವಿಪಕ್ಷಗಳು ಮುಂದಿನ ಚುನಾವಣೆಗೆ ಮುನ್ಸೂಚನೆ ಎನ್ನುತ್ತಿದ್ದಾರೆ. ಹಾಗಾದರೇ ಚನ್ನಪಟ್ಟಣ ಮತ್ತು ಶಿಗ್ಗಾವಿ ಕ್ಷೇತ್ರಗಳ ಚುನಾವಣಾ ಫಲಿತಾಂಶವೂ ಮುನ್ಸೂಚನೆಯಾ? ಅದರ ಬಗ್ಗೆಯೂ ವಿಪಕ್ಷಗಳು ಯಾಕೆ ಮಾತನಾಡುವುದಿಲ್ಲ ಎಂದು ಟಾಂಗ್ ಕೊಟ್ಟರು.






