ಮೈಸೂರು,ಅಕ್ಟೋಬರ್,29,2026(www.justkannada.in): ಮೈಸೂರು ರಾಜಮನೆತನದ ಬಗ್ಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ಜಮಾಯಿಸಿದ ನೂರಾರು ನಾಗರಿಕರು ರಾಜಮನೆತನದ ಬಗ್ಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನ ಖಂಡಿಸಿ ಧರಣಿ ನಡೆಸಿದರು. ಸಚಿವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರೂ ಭಾಗಿಯಾಗಿದ್ದರು. ಇತ್ತೀಚೆಗೆ ಮಾತನಾಡಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ “ಅರಮನೆ ಬೋರ್ಡ್ ಸರ್ಕಾರದ್ದು, ಮೈಸೂರು ಅರಮನೆಯ ಬಹುಪಾಲು ಜಾಗವೂ ಸರ್ಕಾರದ್ದು. ರಾಜಮನೆತನ ವಾಸಕಕ್ಕೆ ಒಂದಿಷ್ಟು ಜಾಗ ಕೊಟ್ಟಿದ್ದೇವೆ ಎಂದಿದ್ದರು. ಸಚಿವರ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.






