ಬೆಂಗಳೂರು,ಅಕ್ಟೋಬರ್,29,2026 (www.justkannada.in): ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಸಿಬಿ ತನಿಖೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.
ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಸಿಸಿಬಿ ಸೈಬರ್ ಪೊಲೀಸರು, ಸ್ಟಿಂಗ್ ನಲ್ಲಿ ಬರುವ ಅಷ್ಟು ವಿಚಾರ ಕಟ್ಟುಕಥೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಸುಳ್ಳು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.







