ಮೈಸೂರು,ಅಕ್ಟೋಬರ್,30,2026 (www.justkannada.in): ಮೈಸೂರು ರಾಜಮನೆತನದ ಬಗ್ಗೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಇಂದು ಮೈಸೂರಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪಿಸಿ ಮೈಸೂರು ವಿವಿ ಮೊಹಲ್ಲಾ ಅಂಚೆ ಕಚೇರಿ ಬಳಿ ಸೇವ್ ಹಿಂದೂ ಟೆಂಪಲ್ಸ್ ಟೀಮ್ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಮೈಸೂರು ರಾಜಮನೆತನದ ಕೊಡುಗೆಗಳ ಬಗ್ಗೆ ಪೋಸ್ಟ್ ಕಾರ್ಡ್ ಮೂಲಕ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ತಿಳಿಸಲು ಮುಂದಾದರು.
ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ನಿನ್ನೆ ಮೈಸೂರು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಪ್ರತಿಭಟನೆ ನಡೆದಿತ್ತು. ಮೈಸೂರು ಅರಮನೆ ಸರ್ಕಾರದ ಆಸ್ತಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.







