Friday, October 30, 2026

Dasara Wishes

ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್...
Happy Dasara
Home Front Page ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್, 30,2026 (www.justkannada.in) : ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳು ಈ ಕೆಳಕಂಡಂತೆ ದತ್ತಿನಿಧಿ, ಪ್ರಶಸ್ತಿಗಳನ್ನು ಸ್ಥಾಪಿಸಿವೆ.

ಬೆಂಗಳೂರಿನ ‘ಅಭಿಮಾನಿ ಪ್ರಕಾಶನ’ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಅಭಿಮಾನಿ ಪ್ರಶಸ್ತಿ”, ಮೈಸೂರಿನ “ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ, ಬೆಂಗಳೂರಿನ ಅಭಿಮನ್ಯು ಪತ್ರಿಕೆ ಸಂಸ್ಥೆಯು ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ಅಂಕಣ/ಸಂಪಾದಕೀಯ/ಪರಿಣಾಮಕಾರಿ ವರದಿಗೆ “ಅಭಿಮನ್ಯು ಪ್ರಶಸ್ತಿ”, ಬೆಂಗಳೂರಿನ ಪ್ರಜಾ ಸಂದೇಶ ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನಕ್ಕೆ “ಪ್ರಜಾಸಂದೇಶ ದತ್ತಿ ಪ್ರಶಸ್ತಿ”, ಹಾಗೂ ಹಿರಿಯ ಪತ್ರಕರ್ತರ ಹೆಸರಿನ ಸ್ಥಾಪಿಸಲಾದ ಕೃಷಿವಲಯದಲ್ಲಿ ಅತ್ಯುತ್ತಮ ವರದಿ/ಅಂಕಣ/ಲೇಖನ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ” ಗಳನ್ನು ಸ್ಥಾಪಿಸಿವೆ. ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ ನಗದು ಬಹುಮಾನ ಒಳಗೊಂಡಿವೆ.ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಈ ಪ್ರಶಸ್ತಿಗಳಿಗೆ ಆಸಕ್ತ ಪತ್ರಕರ್ತರು 01-01-2026 ರಿಂದ 30-10-2026ರ ವರೆಗೆ ಪ್ರಕಟವಾಗಿರುವ ತಮ್ಮ ಒಂದು ಲೇಖನ-ವರದಿಯನ್ನು ಕಳುಹಿಸಬಹುದು.

ಕನ್ನಡ ದೈನಿಕ-ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಹೆಸರು (ಬೈಲೈನ್) ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

ಲೇಖನ ವರದಿಗಳ ಲಕೋಟೆಯಲ್ಲಿ ಯಾವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿರುವುದು ಎಂಬುದನ್ನು ‘ಅಭಿಮಾನಿ ಪ್ರಶಸ್ತಿ-2026’, ‘ಮೈಸೂರು ದಿಗಂತ ಪ್ರಶಸ್ತಿ-2026’, “ಅಭಿಮನ್ಯು ಪ್ರಶಸ್ತಿ-2026* “ಪ್ರಜಾ ಸಂದೇಶ ದತ್ತಿ ಪ್ರಶಸ್ತಿ-2026” ಹಾಗೂ “ಬಸವರಾಜ ದೊಡ್ಡಮನಿ ದತ್ತಿ ಪ್ರಶಸ್ತಿ-2026” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಇದೇ 21-11-2026ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಪ್ರಶಸ್ತಿಗಳ ಆಯ್ಕೆ ಸಂಬಂಧ ಅಕಾಡೆಮಿಯು ಕೈಗೊಳ್ಳುವಾ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Karnataka Media Academy jk02_new jk02 new

 

English Summary
Title

Karnataka Media Academy invites applications for various endowment awards

Short Description
The Karnataka Media Academy has invited submissions from journalists for various endowment awards for the year 2026. Several media organizations across the state have established endowment awards at the Karnataka Media Academy, as detailed below: 'Abhimani Prakashana' (Bengaluru) has instituted the "Abhimani Award" for articles or reports in state or district-level Kannada newspapers that effectively highlight 'social issues'. 'Mysuru Digantha' (Mysuru) has established the "Mysuru Digantha Award" for articles or reports that effectively reflect 'humanitarian issues'. 'Abhimanyu' (Bengaluru) offers the "Abhimanyu Award" for the best article, column, editorial, or impactful report that serves as a voice for marginalized communities. 'Praja Sandesha' (Bengaluru) has instituted the "Praja Sandesha Endowment Award" for articles that effectively depict exploitation. Additionally, the "Basavaraja Doddamani Endowment Award"—named after a senior journalist—is presented for the best report
Keywords
Karnataka Media Academy, invites, applications, various, endowment awards