ಮೈಸೂರು,ನವೆಂಬರ್,2,2026 (www.justkannada.in): ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮತ್ತು ವಿವಿಧ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತಯಾರಿ ಆರಂಭಿಸಿರುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು 45 ದಿನಗಳ ತರಬೇತಿಯನ್ನು ಹಮ್ಮಿಕೊಂಡಿದೆ.
ವಿವಿಧ ರಾಷ್ಟ್ರೀಯ ಹಾಗೂ ಖಾಸಗಿ ವಲಯದ ಬ್ಯಾಂಕ್ ಗಳು, ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಯ (ಆರ್‌ಆರ್‌ಬಿ) ನಾನಾ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿವೆ. ಈ ತರಬೇತಿಯಲ್ಲಿ ಬ್ಯಾಂಕಿಂಗ್ ತಜ್ಞರು, ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು, ವಿವಿಧ ವಿಷಯಗಳ ಪರಿಣಿತರು ಹಾಗೂ ಅಧಿಕಾರಿಗಳು ಮಾರ್ಗದರ್ಶನ ನೀಡಲಿದ್ದಾರೆ. ಇಲ್ಲಿ ಪಡೆಯುವ ತರಬೇತಿಯು ಎಸ್ ಡಿಎ ಹಾಗೂ ಎಫ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹಾಯಕವಾಗಲಿದೆ.
ಆಸಕ್ತರು ನವೆಂಬರ್ 9ರೊಳಗೆ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 0821-2515944 / 9964760090 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದೆಂದು ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mysore, KSOU, Training, Banking, SSC, RRB, competitive exams







