ಮೈಸೂರು, ನವೆಂಬರ್,3,2026 (www.justkannada.in): ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಸೂರಿನಲ್ಲೂ ರೈತರ ಕಿಚ್ಚು ಜೋರಾಗಿದ್ದು ಕಬ್ಬು ಬೆಳೆಗಾರರ ಸಮನ್ವಯ ಸಮಿತಿಯಿಂದ ರೈತ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡರಾದ ಬಡಗಲಪುರ ನಾಗೇಂದ್ರ ಹಳ್ಳಿಕೆರೆ ಭಾಗ್ಯರಾಜ್, ಕುರುಬೂರು ಶಾಂತಕುಮಾರ್ ಮಂಜುಕಿರಣ್, ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಬನ್ನೂರು ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು ಅನ್ನದಾತರು ಕಬ್ಬಿನ ಹೊರೆ ಹೊತ್ತು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು.
ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾನಿರತ ರೈತರು ಮುಂದಾದರು. ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸದ ಸರ್ಕಾರಗಳ ವಿರುದ್ಧ ಮತ್ತು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ವಿರುದ್ಧವೂ ರೈತರು ಕಿಡಿಕಾರಿದರು
ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ರೈತರು ದರ ನಿಗದಿಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.






