ಕೊಪ್ಪಳ,ನವೆಂಬರ್,6,2026 (www.justkannada.in): ರಾಜ್ಯದಲ್ಲಿ ಹಾಲು, ಮೊಸರು, ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಜನಾರ್ದನ ರೆಡ್ಡಿ, ಹಾಲು ತುಪ್ಪ ಬಸ್ ಪ್ರಯಾಣ ಎಲ್ಲವೂ ದುಬಾರಿಯಾಗಿದೆ. ಈ ಸರ್ಕಾರ ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ. ಅದನ್ನು ನಿಭಾಯಿಸಲು ಆಗದೆ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ. ಬೆಲೆ ಏರಿಕೆ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ ಸರ್ಕಾರಕ್ಕೆ ಜನರೇ ಬುದ್ದಿ ಕಲಿಸುತ್ತಾರೆ ಎಂದರು.
ಕಾಂಗ್ರೆಸ್ ಈ ದೇಶದಲ್ಲಿ ಅರಾಜಕತೆ ಸೃಷ್ಠಿ ಮಾಡಲು ಹೊರಟಿದೆ. ಎಸ್ ಐಆರ್ ವಿಚಾರದಲ್ಲಿ ದಿಕ್ಕು ತಪ್ಪಿಸಲು ಕೆಲಸ ಆಗುತ್ತಿದೆ ಎಂದು ಜನಾರ್ದನ ರೆಡ್ಡಿ ಕಿಡಿಕಾರಿದರು.










