ಬೆಂಗಳೂರು,ನವೆಂಬರ್,7,2026 (www.justkannada.in): ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಿವಾಸಕ್ಕೆ ಚಾಕು ಪಾರ್ಸೆಲ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಛಲವಾದಿ ನಾರಾಯಸ್ವಾಮಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ.
ಭಾಷಣ ಮಾಡುತ್ತಿದ್ದ ವೇಳೆ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷವನ್ನು ತುಂಡು ತುಂಡಾಗಿ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಛಲವಾದಿ ನಾರಾಯಣಸ್ವಾಮಿ ಅವರ ಸರ್ಕಾರಿ ನಿವಾಸಕ್ಕೆ ಬ್ಲಿಂಕಿಟ್ ಆ್ಯಪ್ ಮೂಲಕ ಚಾಕು ಬುಕ್ಕಿಂಗ್ ಮಾಡಲಾಗಿದೆ.










