ಮೈಸೂರು,ನವೆಂಬರ್,7,2026 (www.justkannada.in): ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ನವೆಂಬರ್ 5, 6 ಮತ್ತು 7ರಂದು ಆಯೋಜಿಸಲಾದ ವಿಶೇಷ ಇ-ಖಾತಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮೂರು ದಿನಗಳಲ್ಲಿ ಒಟ್ಟು 1,793 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ನವೆಂಬರ್ 5 – 740 ಅರ್ಜಿಗಳು
ನವೆಂಬರ್ 6 – 415 ಅರ್ಜಿಗಳು
ನವೆಂಬರ್ 7 – 638 ಅರ್ಜಿಗಳು
ಆಂದೋಲನದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಡಾಟಾ ಎಂಟ್ರಿ ಆಪರೇಟರ್ಗಳಿಗೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ ಅವರು, ಸ್ಮರಣಿಕೆ ಹಾಗೂ ಸಿಹಿ ವಿತರಿಸುವ ಮೂಲಕ ದೀಪಾವಳಿ ಹಬ್ಬದ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿ, ಅವರ ಸೇವೆಯನ್ನು ಶ್ಲಾಘಿಸಿದ್ದಾರೆ.
ಈ ಆಂದೋಲನಕ್ಕೆ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಗಿದೆ. ಸ್ವೀಕರಿಸಲಾದ ಎಲ್ಲಾ ಅರ್ಹ ಅರ್ಜಿಗಳಿಗೆ ಸಂಬಂಧಿಸಿದ ಇ-ಖಾತಾಗಳನ್ನು ದಿನಾಂಕ 18-11-2026ರಂದು ಬೆಳಿಗ್ಗೆ 10 ಗಂಟೆಯಿಂದ ಮೈಸೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ವಿತರಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ ತಿಳಿಸಿದ್ದಾರೆ.






