ಬೆಂಗಳೂರು,ನವೆಂಬರ್,9,2026 (www.justkannada.in): ಮೇಕೆದಾಟು ಯೋಜನೆ ಸಂಬಂಧ ಪ್ರಧಾನಿ ಮೋದಿ ಅವರಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ ಬರದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್, ಸಿಎಂ ವಿಜಯ್ ಗೆ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಮಾಹಿತಿ ಇಲ್ಲಅನ್ನಿಸುತ್ತೆ. ಅವರ ಅಧಿಕಾರಿಗಳು ಮಾಹಿತಿ ನೀಡುತ್ತಾರೆಂಬ ವಿಶ್ವಾಸವಿದೆ. ಈ ಡ್ಯಾಂನಿಂದ ರಾಜ್ಯಕ್ಕೆ ಯಾವುದೇ ಹೆಚ್ಚುವರಿ ನೀರಿನ ಲಾಭವಿಲ್ಲ. ಕುಡಿಯುವ ನೀರು ವಿದ್ಯುತ್ ಉತ್ಪಾದನೆಗೆ ಮಾತ್ರ ಬಳಕೆಯಾಗುತ್ತದೆ. ಈ ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಅನುಕೂಲ. ಹೀಗಾಗಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ವಾಸ್ತವಾಂಶ ಅರಿತುಕೊಳ್ಳಲಿ ಎಂದು ಸಿಎಂ ವಿಜಯ್ ಗೆ ಸಲಹೆ ನೀಡಿದರು.
ಅಣೆಕಟ್ಟು ನಿರ್ಮಾಣ ಮಾಡುವುದು ಕರ್ನಾಟಕದ ಹಕ್ಕು. ತಮಿಳುನಾಡಿಗೆ ನೀರು ಪಡೆಯುವುದು ಅದರ ಹಕ್ಕು. ಈ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ಸ್ಪಷ್ಟ ಆದೇಶ ನೀಡಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.






