ಮೈಸೂರು,ನವೆಂಬರ್,9,2026 (www.justkannada.in): ಡಾ. ರಮ್ಯ ವೈ.ಎಸ್ ಅವರು ರಚಿಸಿರುವ ಸಂಕೋಧನಾ ಆಧಾರಿತ ಗ್ರಂಥ ಚಲಿಸುವ ಬಂಡೆ ಡಿ.ಕೆ ಶಿವಕುಮಾರ್’ ಪುಸ್ತಕ ಲೋಕಾರ್ಪಣೆ ಸಮಾರಂಭ ನವೆಂಬರ್ 11 ರಂದು ನಡೆಯಲಿದೆ.
ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ(ಸೆನೆಟ್ ಭವನ)ದಲ್ಲಿ ಅಂದು ಶೃಂಗೇರಿ ಮಠದ ಭಾರತಿತೀರ್ಥ ಶ್ರೀ ಮತ್ತು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಗ್ರಂಥವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿರಲಿದ್ದಾರೆ.
ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು ನಗರಾಭಿವೃದ್ದಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಜಿ.ಟಿ ದೇವೇಗೌಡ, ತನ್ವೀರ್ ಸೇಠ್, ಮಾಜಿ ಸಚಿವ ಕೆ.ವೆಂಕಟೇಶ್ ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಎನ್.ಕೆ ಲೋಕನಾಥ್ ಶಾಸಕ ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಲೇಖಕರಾದ ರಮ್ಯ ವೈ.ಎನ್ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.






