ಬೆಳಗಾವಿ, ನವೆಂಬರ್, 12,2026 (www.justkannada.in): ಡಿಸೆಂಬರ್ 2 ರಿಂದ ಬೆಳಗಾವಿಯ ಸುರ್ವಣಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸಿದ್ದತಾ ಕಾರ್ಯಗಳು ಭರದಿಂದ ಸಾಗಿವೆ.
ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 5,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಇದರಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪೊಲೀಸರ ಜೊತೆಗೆ ಕೆಎಸ್ಆರ್ಪಿ ತುಕುಡಿಗಳು ಸೇರಿವೆ. ಭದ್ರತೆಯ ಭಾಗವಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಬ್ಯಾರಿಕೇಡಿಂಗ್ ಕಾರ್ಯ ಕೂಡ ಪ್ರಗತಿಯಲ್ಲಿದೆ.
ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಅವರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಾಗಿದ್ದು, ಅಧಿವೇಶನ ಸಂದರ್ಭದಲ್ಲಿ ನಡೆಯುವ ಪ್ರತಿಭಟನೆಗಳನ್ನು ನಿರ್ವಹಿಸಲು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲಾಗಿದೆ. ಇನ್ನು ಸುವರ್ಣಸೌಧದಲ್ಲಿ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದು ಸಿದ್ದತಾ ಕಾರ್ಯ ಬರದಿಂದ ಸಾಗಿದೆ.
Winter session, Dec 2, Belagavi, Preparations, Suvarna Soudha, police security






