Sunday, September 20, 2026

BDA Apartments

ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು… BDA JK_Adv BDA Adv
Home Cinema ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು…

ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲು…

ಮುಂಬೈ,ನ,11,2019(www.justkannada.in):   ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ದೇಶದ ಹೆಸರಾಂತ ಗಾಯಕಿ ಲತಾ ಮಂಗೇಶ್ಕರ್‌  ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಲತಾ ಮಂಗೇಶ್ಕರ್‌ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಹೀಗಾಗಿ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ತಜ್ಞ ವೈದ್ಯರ ತಂಡ ಲತಾ ಮಂಗೇಶ್ವರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನಲಾಗಿದೆ

ವಯೋಸಹಜ ಸಮಸ್ಯೆಯಿಂದ ಲತಾ ಮಂಗೇಶ್ಕರ್‌ ಅವರು ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಲತಾ ಮಂಗೇಶ್ಕರ್‌ ಅವರ ಆರೋಗ್ಯ ಪರಿಸ್ಥಿತಿ ಕುರಿತು ವೈದ್ಯರ ಬಳಿ ಕುಟುಂಬ ಸದಸ್ಯರು ಮಾಹಿತಿ ಪಡೆದಿದ್ದಾರೆ.

Key words: Famoussinger -Latha Mangeshkar –hospitalized-mumbai