ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಸಿಎಂ ಬಿಎಸ್ ವೈ: ಅನರ್ಹ ಶಾಸಕರಿಗೆ ಟಿಕೆಟ್ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ…?

ಬೆಂಗಳೂರು,ನ,13,2019(www.justkannada.in):  ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಸುಪ್ರೀಂಕೋರ್ಟ್ ಆದೇಶಕ್ಕೆ ಇಡೀ ದೇಶ ಕಾಯ್ತಿತ್ತು.  ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಸಿದ್ದರಾಮಯ್ಯ ಜತೆ ಸೇರಿ ಷಡ್ಯಂತ್ರಾ ಮಾಡಿ ಶಾಸಕರನ್ನ ಅನರ್ಹಗೊಳಿಸಿದ್ದರು. ಈಗ  ಅದಕ್ಕೆ ಸುಪ್ರೀಂಕೋರ್ಟ್ ತಕ್ಕ ತೀರ್ಪು ಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.

ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೆ ಅನರ್ಹ ಶಾಸಕರ ಜತೆ ಸಭೆ ನಡೆಸಲು ಮುಂದಾಗಿರುವ ಸಿಎಂ ಬಿಎಸ್ ಯಡಿಯೂರಪ್ಪ, ಇವತ್ತು ಕೋರ್ ಕಮಿಟಿ ಸಭೆ ಇದೆ. ಟಿಕೆಟ್ ಯಾರಿಗೆ ಕೊಡಬೇಕು ಅಂತ ಚರ್ಚೆ ಮಾಡ್ತೇವೆ. ಟಿಕೆಟ್ ಯಾರಿಗೆ ಅಂತ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಟಿಕೆಟ್ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೂ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

ಇಂದು ಸಂಜೆ ಅನರ್ಹ ಶಾಸಕರು ವಾಪಸ್ ಬೆಂಗಳೂರಿಗೆ ಬರ್ತಾರೆ. ಅವರ ಜೊತೆಗೂ ನಾವು ಸಮಾಲೋಚನೆ ಮಾಡ್ತೇವೆ. ನಾಳೆಯಿಂದಲೇ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಯತ್ನಿಸುತ್ತೇವೆ. ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Key words: CM BS yeddyurappa- welcomed -Supreme Court-judgement