ಮೈಸೂರು, ನವೆಂಬರ್ 17, 2019 (www.justkannada.in): ಟಿಪ್ಪರ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಲ್ಕುಂದ ಗ್ರಾಮದ ಬೋರೆ ಹೊಸಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.
ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ಬಳಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಈ ವೇಳೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






