Thursday, August 20, 2026

BDA Apartments

Home Front Page ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ  18 ಸ್ಥಾನ ಬರುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ…

ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ  18 ಸ್ಥಾನ ಬರುತ್ತೆ- ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ…

ತಿರುಮಲ,ಮೇ,18,2019(www.justkannada.in):  ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ 18 ಸ್ಥಾನ ಬರುತ್ತೆ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ತಿರುಮಲಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮಾಧ್ಯಮದ ಜತೆ ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ 18ರಿಂದ 19 ಸ್ಥಾನ ಗೆಲ್ಲಲಿವೆ. ರಾಷ್ಟ್ರರಾಜಕಾರಣದಲ್ಲಿ ರಾಹುಲ್ ಗಾಂಧಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.

ನಾವು ಕಂಫರ್ಟ್ ಆಗಿದ್ದೇವೆ ಯಾವುದೇ ತೊಂದರೆ ಇಲ್ಲ. ಜೆಡಿಎಸ್ ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದೇವೆ. ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

Key words: According to the survey, JDS – Congress alliance win 18 seats-  CM HD Kumaraswamy

#political #cm hd kumaraswamy #thirumala