Sunday, September 13, 2026

BDA Apartments

ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ…...
Home Front Page ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ…

ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ…

ಬೆಂಗಳೂರು, ನ,21,2019(www.justkannada.in): ಕರ್ನಾಟಕ ಉಪ ಲೋಕಾಯುಕ್ತರಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ  ನ್ಯಾಯಾಧೀಶ  ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಲ್ಲಿ ಇಂದು  ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾ : ಪಿ. ವಿಶ್ವನಾಥಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ್ ಭಾಸ್ಕರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Key words: Appoint- Deputy Lokayukta- Bhimanaguda Sanganagouda Patil- sworn- oaths