Tuesday, September 22, 2026

BDA Apartments

ಕಿರಿಕ್ ಬೆಡಗಿ ರಶ್ಮಿಕಾ ಮಂದಣ‍್ಣ ಈಗ ನ್ಯಾಷನಲ್ ಕ್ರಷ್ ! BDA JK_Adv BDA Adv
Home Front Page ನನಗೆ ಗೊತ್ತಿಲ್ಲದೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ್ದಾರೆ- ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ…

ನನಗೆ ಗೊತ್ತಿಲ್ಲದೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದ್ದಾರೆ- ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆ…

ಮುಂಬೈ,ನ,23,2019(www.justkannada.in):  ಮಹಾರಾಷ್ಟ್ರ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆಯಿಂದ ಎನ್ ಸಿಪಿ- ಬಿಜೆಪಿ ಸರ್ಕಾರ ರಚನೆ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಈ ಕುರಿತು ಇಂದು ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್, ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು ಎನ್ ಸಿಪಿ ನಿರ್ಣಯವಲ್ಲ.  ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು ನನಗೆ ಗೊತ್ತಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ.  ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವ ಅಜಿತ್ ಪವಾರ್ ಅವರ ನಿರ್ಧಾರ ವೈಯಕ್ತಿಕವಾದುದು. ಇದು ಎನ್‌ಸಿಪಿ ಪಕ್ಷದ ನಿರ್ಧಾರವಲ್ಲ. ಅವರ ನಿರ್ಧಾರವನ್ನು ನಾವು ಬೆಂಬಲಿಸುವುದಿಲ್ಲ’ ಎಂದು ಶರದ್ ಪವಾರ್  ತಿಳಿಸಿದ್ದಾರೆ.

Key words: bjp-ncp- government – formed – Maharashtra -NCP chief- Sharad Pawar.