Tuesday, September 29, 2026

BDA Apartments

ಇದೇ ನನ್ನ ಕೊನೆಯ ಚುನಾವಣೆ: ನನ್ನ ಮಾತಿಗೆ ಬದ್ಧ ಎಂದ ಬಿಜೆಪಿ ಅಭ್ಯರ್ಥಿ ಆನಂದ್ ...
Home Front Page ಇದೇ ನನ್ನ ಕೊನೆಯ ಚುನಾವಣೆ: ನನ್ನ ಮಾತಿಗೆ ಬದ್ಧ ಎಂದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್…

ಇದೇ ನನ್ನ ಕೊನೆಯ ಚುನಾವಣೆ: ನನ್ನ ಮಾತಿಗೆ ಬದ್ಧ ಎಂದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್…

ಹೊಸಪೇಟೆ,ನ,23,2019(www.justkannada.in):  ಇದೇ ನನ್ನ ಕೊನೆಯ ಚುನಾವಣೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೊಸಪೇಟೆ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಘೋಷಣೆ ಮಾಡಿದ್ದಾರೆ.

ಹೊಸಪೇಟೆ ಕ್ಷೇತ್ರ ಹೊಸ ಚಿನ್ನಾಪುರದಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ  ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್, ಇದು ಸಾರ್ವತ್ರಿಕ ಚುನಾವಣೆ ಅಲ್ಲ. ಆಕಸ್ಮಿಕವಾಗಿ ಬಂದಿದೆ. ಇದೇ ನನ್ನ ಕೊನೆಯ ಚುನಾವಣೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಮಾತಿಗೆ ನಾನು ಬದ್ಧನಿದ್ದೇನೆ ಎಂದು ತಿಳಿಸಿದರು.

ಹಾಗೆಯೇ ಮುಂದಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಆನಂದ್ ಸಿಂಗ್ ಹೇಳಿದರು.

Key words: This is -my last- election-hospet- BJP candidate -Anand Singh