Monday, October 12, 2026

Dasara Wishes

Happy Dasara
Home Front Page ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ : ಸಿದ್ಧರಾಮಯ್ಯ 3 ವರ್ಷ ವಿಪಕ್ಷ ಸ್ಥಾನದಲ್ಲೇ...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ : ಸಿದ್ಧರಾಮಯ್ಯ 3 ವರ್ಷ ವಿಪಕ್ಷ ಸ್ಥಾನದಲ್ಲೇ ಇರಬೇಕು- ಸಿಎಂ ಬಿಎಸ್ ವೈ ಟಾಂಗ್…

ಮೈಸೂರು,ನ,26,2019(www.justkannada.in):   ರಾಜ್ಯದಲ್ಲಿ ಉಪಚುನಾವಣೆಯ ನಂತರ ಬಿಜೆಪಿ ಸರ್ಕಾರ ಪತನವಾಗಿ ಮಧ್ಯಾಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ. ಹೀಗಾಗಿ ಸಿದ್ಧರಾಮಯ್ಯ ಮೂರು ವರ್ಷಗಳ ಕಾಲ ವಿಪಕ್ಷ ಸ್ಥಾನದಲ್ಲೇ ಇರಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಮಧ್ಯಾಂತರ ಚುನಾವಣೆ ಬರುತ್ತದೆಂದು ಸಿದ್ಧರಾಮಯ್ಯ ಹೇಳುತ್ತಿದ್ದಾರೆ. ಆದರೆ ಜನರಿಗೆ ಮಧ್ಯಂತರ ಚುನಾವಣೆ ಬೇಡವಾಗಿದೆ. ಹೀಗಾಗಿ ಮಧ್ಯಾಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ. ಸಿದ್ಧರಾಮಯ್ಯ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಮೂರು ವರ್ಷ ವಿಪಕ್ಷ ನಾಯಕನಾಗಿಯೇ ಇರಬೇಕು ಎಂದು ನುಡಿದರು.

ಬಿಜೆಪಿ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ. ಇದನ್ನ ಪ್ರಚಾರಕ್ಕಾಗಿ ಹೇಳುತ್ತಿಲ್ಲ. ಅಳೆದು ತೂಗಿ ಹೇಳ್ತಿದ್ದೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

Key words: no chance – interim -election –mysore- cm bs yeddyurappa