Saturday, September 26, 2026

BDA Apartments

ಬೈ ಎಲೆಕ್ಷನ್ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿ...
Home Front Page ಬೈ ಎಲೆಕ್ಷನ್ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

ಬೈ ಎಲೆಕ್ಷನ್ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

ಬೆಂಗಳೂರು,ಡಿ,9,2019(www.justkannada.in):  ರಾಜ್ಯದಲ್ಲಿ ನಡೆದಿ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ‘ಕೈ’ ಸೋಲನುಭವಿಸಿದ ಹಿನ್ನೆಲೆ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ.ಸಿದ್ಧರಾಮಯ್ಯ ಬಳಿಕ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡಿದ್ದಾರೆ.

ಉಪ ಚುನಾವಣೆಯ ನೈತಿಕ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.  ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಘೋಷಣೆ ಮಾಡಿರುವ  ದಿನೇಶ್ ಗುಂಡೂರಾವ್, ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿಲ್ಲ.  ನನ್ನ ನಿರೀಕ್ಷೆ ತಪ್ಪಾಗಿದೆ. ನಾವು ಬಯಸಿದ್ದ ಫಲಿತಾಂಶ ಹುಸಿಯಾಗಿದೆ. ಜನರ ತೀರ್ಪಿಗೆ ನಾವು ಬದ್ಧ. ಜನರ ತೀರ್ಪನ್ನ ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಗೆಲ್ಲಲು ಶಕ್ತಿ ಮೀರಿ ಪ್ರಯತ್ನಿಸಿದ್ದವು. ಗೆದ್ದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ಧರಾಮಯ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು.

Key words: Dinesh Gundurao -resigns – KPCC president – by election- defeat