Sunday, September 13, 2026

BDA Apartments

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂ...
Home Front Page ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ: ಪೊಲೀಸರಿಂದ ತಡೆ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರು ಚಲೋ: ಪೊಲೀಸರಿಂದ ತಡೆ…

ತುಮಕೂರು,ಡಿ,11,2019(www.justkannada.in):  ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರು ಚಲೋ ನಡೆಸುತ್ತಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೆಂಗಳೂರು ಚಲೋಗೆ ತುಮಕೂರಿನಲ್ಲಿ ಪೊಲೀಸರು ತಡೆ ನೀಡಿದ್ದು ಹೀಗಾಗಿ ತುಮಕೂರಿನಲ್ಲೇ ಸಂಜೆವರೆಗೆ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು. ಸರ್ಕಾರ ಮಧ್ಯಪ್ರವೇಶಿಸಿ ತಮ್ಮ ಬೇಡಿಕೆಗಳನ್ನ ಈಡೇರಿಸಬೇಕು.  ಬೇಡಿಕೆ ಈಡೇರಿಸದಿದ್ದರೇ ಬೆಂಗಳೂರಿನಲ್ಲಿ ಬೆಂಗಳೂರು ಚಲೋವನ್ನ ಹಮ್ಮಿಕೊಳ್ಳಲಾಗುತ್ತದೆ  ಎಂದು ಎಚ್ಚರಿಕೆ ನೀಡಿದ್ದಾರೆ.

ಅಂಗನವಾಡಿಗೆ ಎಲ್ ಕೆಜಿ ಮತ್ತು ಯುಕೆಜಿಯನ್ನು ಸೇರ್ಪಡೆಗೊಳಿಸಬೇಕು ಹಾಗೂ 21 ಸಾವಿರ ರೂ. ಮಾಸಿಕ ವೇತನ ನೀಡಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಇಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Key words: Bangalore Chalo – Anganwadi worker- various -demands.