Friday, August 14, 2026

BDA Apartments

Home Front Page ನಾಳೆ ಮಂಡ್ಯ ಜಿಲ್ಲೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ: ಉಪಚುನಾವಣೆ ಗೆಲುವಿನ ಬಳಿಕ ಮೊದಲ ಭೇಟಿ ಯಾಕೆ ಗೊತ್ತೆ..?

ನಾಳೆ ಮಂಡ್ಯ ಜಿಲ್ಲೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ: ಉಪಚುನಾವಣೆ ಗೆಲುವಿನ ಬಳಿಕ ಮೊದಲ ಭೇಟಿ ಯಾಕೆ ಗೊತ್ತೆ..?

ಮಂಡ್ಯ,ಡಿ,11,2019(www.justkannada.in):  ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ  ಸಿಎಂ ಬಿಎಸ್ ಯಡಿಯೂರಪ್ಪ ನಾಳೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಉಪಚುನಾವಣೆಯಲ್ಲಿ ಗೆಲುವಿನ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡುತ್ತಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಗೆ ಸಿಎಂ ಬಿಎಸ್ ವೈ ಭೇಟಿ ನೀಡಿ, ಆದಿಚುಂಚನಗಿರಿ ಮಠದ ವತಿಯಿಂದ ನಡೆಯುವ ರಾಜ್ಯ ಮಟ್ಟದ ಅಂತರ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಇದಕ್ಕೂ ಮುನ್ನ ಸಿಎಂ ಬಿಎಸ್ ಯಡಿಯೂರಪ್ಪ  ಆದಿಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಗಳನ್ನ ಭೇಟಿ ಮಾಡುವ ಸಾಧ್ಯತೆ ಇದೆ.

Key words: CM BS Yeddyurappa –visit-Mandya -district- tomorrow.