Friday, October 9, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ನಾವಿಬ್ಬರು ಶತ್ರುಗಳಲ್ಲ : ಶತ್ರುಗಳೆಂದು ಕರೆಯಬೇಡಿ- ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಳಿಕ ಹೆಚ್.ವಿಶ್ವನಾಥ್ ಹೇಳಿಕೆ..

ನಾವಿಬ್ಬರು ಶತ್ರುಗಳಲ್ಲ : ಶತ್ರುಗಳೆಂದು ಕರೆಯಬೇಡಿ- ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಬಳಿಕ ಹೆಚ್.ವಿಶ್ವನಾಥ್ ಹೇಳಿಕೆ..

ಬೆಂಗಳೂರು,ಡಿ,14,2019(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ  ಪದೇ ಪದೇ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ನಿಂದ ಹೊರಬಂದು ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಇದೀಗ ಸಿದ್ಧರಾಮಯ್ಯ ಮತ್ತು ನಾನು ಶತ್ರುಗಳಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಹೌದು, ಮಾಜಿ ಸಿಎಂ ಸಿದ್ಧರಾಮಯ್ಯಗೆ  ಖಾಸಗಿ ಆಸ್ಪತ್ರೆಯಲ್ಲಿ  ಆಂಜಿಯೋ ಪ್ಲಾಸ್ಟಿ ಸರ್ಜರಿಯಾಗಿದ್ದು ಹಲವು ನಾಯಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಾಗೆಯೇ ಇಂದು ಹುಣಸೂರು ಬಿಜೆಪಿ ಪರಾಜಿತ ಅಭ್ಯರ್ಥಿ ಹೆಚ್.ವಿಶ್ವನಾಥ್ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಸಿದ್ಧರಾಮಯ್ಯರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ವಿಶ್ವನಾಥ್, ನಾನು ಸಿದ್ಧರಾಮಯ್ಯ ಶತ್ರುಗಳಲ್ಲ. ನಾನು ಸಿದ್ಧು ಇಂಡಿಯಾ ಪಾಕಿಸ್ತಾನ್ ಅಲ್ಲ. ನಮ್ಮನ್ನ ಶತ್ರುಗಳೆಂದು ಕರೆಯಬೇಡಿ. ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ಮೇಲೆ ನನಗೆ ಪ್ರೀತಿ ಇದೆ ಎಂದು ಹೇಳಿಕೆ ನೀಡಿದ್ದಾರೆ.

Key words: H. Vishwanath-visit- hospital-former cm- Siddaramaiah’s- health.