Thursday, August 13, 2026

BDA Apartments

Home Front Page ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೃದಯಸಂಬಂಧಿ ಸಮಸ್ಯೆಯಿಂದ ಸಿದ್ದರಾಮಯ್ಯ ಅವರನ್ನು ಮಲ್ಲೇಶ್ವರಂನ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಆಂಜಿಯೋಪ್ಲಾಸ್ಟ್ ಮೂಲಕ ಸ್ಟಂಟ್ ನ್ನು ಅಳವಡಿಸಲಾಗಿತ್ತು.