Tuesday, August 18, 2026

BDA Apartments

Home Front Page ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರೇ ಹೇಳಿ ಮಾಡಿಸಿದಂತಿದೆ-ಡಿಸಿಎಂ ಪರಮೇಶ್ವರ್ ಟೀಕೆ…

ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರೇ ಹೇಳಿ ಮಾಡಿಸಿದಂತಿದೆ-ಡಿಸಿಎಂ ಪರಮೇಶ್ವರ್ ಟೀಕೆ…

ಬೆಂಗಳೂರು,ಮೇ,20,2019(www.justkannada.in):  ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧ್ಯಕ್ಷರೇ ಹೇಳಿ ಮಾಡಿಸಿದಂತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.

ಮತದಾನೋತ್ತರ ಸಮೀಕ್ಷೆಯಲ್ಲಿ ಎನ್ ಡಿಎಗೆ ಮುನ್ನಡೆ ಹಿನ್ನೆಲೆ ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಮತದಾನೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ದೇಶದಲ್ಲಿ ವಸ್ತು ಸ್ಥಿತಿಯೇ ಬೇರೆ ಇದೆ. 300 ಸ್ಥಾನ ಬರುತ್ತೆಂದು ಹೇಳಿ ಬಿಜೆಪಿ ಸಮಾಧಾನ ಪಟ್ಟುಕೊಳ್ಳುತ್ತಿದೆ, ಆದರೇ ಫಲಿತಾಂಶ ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ 20 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ. ಈ ಬಾರಿ ಸಮೀಕ್ಷಾ ವರದಿ ಸಂಪೂರ್ಣ ತಪ್ಪಿದೆ. ಅದರಲ್ಲೂ ಕರ್ನಾಟಕದ ಸ್ಥಿತಿ ಗೊತ್ತಿದೆ. ಜೆಡಿಎಸ್‌ ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನ ಗಳಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ.  ವಸ್ತು ಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: I do not believe in Exit Polls-DCM Parameswar

#election #politicalnews #bangalore #parameshwar