Tuesday, August 11, 2026

BDA Apartments

Home Front Page ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ…

ಚಾಮರಾಜನಗರ,ಡಿ,18,2019(www.justkannada.in): ತ್ರಿವಳಿ ಮಕ್ಕಳಿಗೆ ತಾಯಿ ಜನ್ಮ ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರದ ಕೆ.ಗುಡಿ ಅರಣ್ಯ ಪ್ರದೇಶ ಭೂತಣ್ಣಿ ಪೋಡಿನ ಸೋಲಿಗ ಮಹಿಳೆ ಬಸಮ್ಮಣಿ ಮೂರು ಹೆಣ್ಣು ಮಕ್ಕಳಿಗೆ ಜನ್ಮಕೊಟ್ಟ ತಾಯಿ. ಬಸಮ್ಮಣಿ ಅವರು ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯದಿಂದಿದ್ದಾರೆ.

ವೈದ್ಯರು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತೀವ್ರ ನಿಗಾ ಘಟಕದ ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ.

Key words: chamarajanagar- mother – gave- birth – three-children