Thursday, August 13, 2026

BDA Apartments

Home Front Page ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ  ಕಾಂಗ್ರೆಸ್ ನಿಂದ ಪ್ರತಿಭಟನೆ…

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ  ಕಾಂಗ್ರೆಸ್ ನಿಂದ ಪ್ರತಿಭಟನೆ…

ಮೈಸೂರು,ಡಿ,18,2019(www.justkannada.in): ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ  ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ನಗರದ ಕಾಂಗ್ರೆಸ್ ಕಛೇರಿ ಮುಂಭಾಗ  ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು. ಪೌರತ್ವ ಕಾಯ್ದೆ ಗೆಜೆಟ್ ಸುಡುವ ಮೂಲಕ ಕಾಂಗ್ರೆಸ್ ಜಿಲ್ಲಾ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಆರ್,ಎಸ್ ಎಸ್ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಮುಂದಿನ ದಿನಗಳಲ್ಲಿ ಪ್ರತಿಯೊಂದು ಧರ್ಮಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ತೊಂದರೆಯಾಗುತ್ತದೆ. ಇದು ಮುಂದಿನ ದಿನಗಳಲ್ಲಿ ಕೇವಲ ಮುಸ್ಲಿಂ ಧರ್ಮರಿಗಲ್ಲದೆ ಹಿಂದೂ ಧರ್ಮೀಯರಿಗೂ ತೊಂದರೆಯಾಗಲಿದೆ. ಹಿಂದುತ್ವ ಹೆಸರಿನಲ್ಲಿ ರಾಷ್ಟ್ರಕ್ಕೆ ಬೆಂಕಿ ಹಚ್ಚುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

Key words: Congress – Mysore –protest-against -Citizenship Amendment Act…