Tuesday, August 11, 2026

BDA Apartments

Home Front Page ಬೆಂಗಳೂರಿನ ವಿದ್ಯಾಪೀಠದಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಅಂತ್ಯಕ್ರಿಯೆ ಸಕಲ ಸಿದ್ಧತೆ

ಬೆಂಗಳೂರಿನ ವಿದ್ಯಾಪೀಠದಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಅಂತ್ಯಕ್ರಿಯೆ ಸಕಲ ಸಿದ್ಧತೆ

ಬೆಂಗಳೂರು, ಡಿಸೆಂಬರ್ 29, 2019 (www.justkannada.in): ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅಂತ್ಯಕ್ರಿಯೆ ಬೆಂಗಳೂರಿನ ವಿದ್ಯಾಪೀಠದಲ್ಲಿಂದು ನೆರವೇರಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಇಂದು ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ವಿಶೇಷ ಸೇನಾ ಹೆಲೆಕಾಪ್ಟರ್​ ಮೂಲಕ ಶ್ರೀಗಳ ಪಾರ್ಥೀವ ಶರೀರವನ್ನು ಬೆಂಗಳೂರಿನ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ತರಲಾಗುತ್ತದೆ.

ಬಳಿಕ ಬಸವನಗುಡಿ ನ್ಯಾಷನಲ್​ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಕೆಲಕಾಲ ಪಾರ್ಥೀವ ಶರೀರವನ್ನು ಇಡಲಾಗುತ್ತದೆ. ಅಂತಿಮ ದರ್ಶನ ಮುಗಿದ ಬಳಿಕ ವಿಧಿವಿಧಾನಗಳನ್ನು ನೇರವೇರಿಸಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ಇದಕ್ಕಾಗಿ ವಿದ್ಯಾಪೀಠದ ಕೃಷ್ಣ ಮಂದಿರ ಎಡಭಾಗದಲ್ಲಿ ವೃಂದಾವನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಲಭಾಗದಲ್ಲಿ ಸರ್ಕಾರಿ ಗೌರವ ನೀಡಲು ಸಕಲ ಸಿದ್ಧತೆ ನಡಡಯುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.