Monday, August 3, 2026

BDA Apartments

Home Front Page ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ…

ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ…

ಮೈಸೂರು,ಡಿ,30,2019(www.justkannada.in): ನಗುವಿನಹಳ್ಳಿಯಲ್ಲಿ ಸ್ಮಶಾನ ಜಾಗ ಒತ್ತುವರಿ ತೆರುವಿಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು  ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗ್ರಾಮಸ್ಥರು ಮೈಸೂರು ತಾಲ್ಲೂಕು ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು. ಸ್ಮಶಾನ ಭೂಮಿಯ  ಸರ್ವೆ ನಂ ಮೈಸೂರು ತಾಲ್ಲೂಕಿಗೆ ಸೇರುವುದರಿಂದ ಮೈಸೂರು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ಸ್ಮಶಾನ ಜಾಗ ಒತ್ತುವರಿಯಾಗಿದೆ. ಶೀಘ್ರವಾಗಿ ಒತ್ತುವರಿ ತೆರವು ಮಾಡಬೇಕು. ಈ ಬಗ್ಗೆ ಸಾಕಷ್ಟು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಪ್ರಭಾವಿಗಳಯ ಸ್ಮಶಾನ ಜಾಗ ಒತ್ತವರಿ ಮಾಡಿಕೊಂಡಿದ್ದಾರೆಂದು  ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Key words: Protest – Mysore- demanding- clearing -cemetery – Consumption