Sunday, September 27, 2026

BDA Apartments

ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾಮಗಾರಿ ಸ್ಥಗಿತ… BDA JK_Adv BDA Adv
Home Front Page ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾಮಗಾರಿ ಸ್ಥಗಿತ…

ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಕಾಮಗಾರಿ ಸ್ಥಗಿತ…

ರಾಮನಗರ,ಡಿ,31,2019(www.justkannada.in): ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಯೇಸು ಕ್ರಿಸ್ತ ಪ್ರತಿಮಿನಿರ್ಮಾಣ ಕಾಮಗಾರಿಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕನಕಪುರದ ಕಪಾಲಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್  ಶಿಲನ್ಯಾಸ ನೆರವೇರಿಸಿದ್ದರು. ಇದಕ್ಕೆ ಹಲವು ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದರು. ಈ ನಡುವೆ ಡಿಸೆಂಬರ್ 28 ರಂದು ರಾಮನಗರ ಎಸಿ ಕನಕಪುರ, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಧಿಕಾರಿಗಳು ಭೇಟಿ ನೀಡಿದ ಬಳಿಕ  ಏಸು ಪ್ರತಿಮೆ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಇನ್ನು  ಕಪಾಲ ಬೆಟ್ಟದಲ್ಲಿ  ಸಾತನೂರು ಠಾಣಾ ಪೊಲೀಸರು ಭದ್ರತೆ ವಹಿಸಿದ್ದಾರೆ. ಕಪಾಲಿಬೆಟ್ಟದಲ್ಲಿ 115 ಅಡಿ ಎತ್ತರದ ಯೇಸು ಪ್ರತಿಮೆ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದ್ದು, ಈ ಬಗ್ಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

Key words: kanakapur- construction – statue -Jesus – breakdown